ಬಾಂಗ್ಲಾದೇಶ: ಖಾಸಗಿ ಕಂಟೈನರ್ ಡಿಪೋದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರ ಪರಿಣಾಮ 16 ಮಂದಿ ಸಾವನ್ನಪ್ಪಿರುವ ಘಟನೆ ಚಿತ್ತಗಾಂಗ್‌ನ ಸೀತಾಕುಂಡದಲ್ಲಿ ನಡೆದಿದೆ.
ಉಪಜಿಲಾಜಿಲಾದ ಕಡಮ್ರಸುಲ್ ಪ್ರದೇಶದ ಬಿಎಂ ಕಂಟೈನರ್ ಡಿಪೋದಲ್ಲಿ ಈ ಘಟನೆ ನಡೆದಿದ್ದು, 16 ಮಂದಿ ಸಾವನ್ನಪ್ಪಿದ್ದರೆ, ಸುಮಾರು 450 ಜನರು ಗಾಯಗೊಂಡಿದ್ದಾರೆ.
ಕಂಟೈನರ್ ಡಿಪೋಗೆ ರಾಸಾಯನಿಕಗಳಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
Advertisement. Scroll to continue reading.
ಸುದ್ದಿ ತಿಳಿದ ಅಗ್ನಿಶಾಮಕ ದಳದವರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಆದರೆ, ಸ್ಫೋಟದ ತೀವ್ರತೆ ಹೆಚ್ಚಾಗಿದ್ದು, ಬೆಂಕಿ ಮತ್ತಷ್ಟು ವ್ಯಾಪಿಸಿದೆ ಎಂದು ತಿಳಿದುಬಂದಿದೆ.