Connect with us

Hi, what are you looking for?

Diksoochi News

ಕರಾವಳಿ

ಹೆಬ್ರಿ : ಸರ್ಜರಿ ಭೀತಿ; ವ್ಯಕ್ತಿ ಆತ್ಮಹತ್ಯೆ

2

ಹೆಬ್ರಿ : ಕ್ಯಾನ್ಸರ್ ನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಸರ್ಜರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾರ ಗ್ರಾಮದಲ್ಲಿ ನಡೆದಿದೆ.

ಸದಾಶಿವ ಶೆಟ್ಟಿ (81) ಆತ್ಮಹತ್ಯೆ ಮಾಡಿಕೊಂಡವರು.

ಸುಮಾರು ಮೂರು ವರ್ಷಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು ಈ ಬಗ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಮಾಡಿಸಿದರೂ ಗುಣಮುಖವಾಗಿರುವುದಿಲ್ಲ.

Advertisement. Scroll to continue reading.

ಖಾಸಗಿ ಆಸ್ಪತ್ರೆಯ ವೈದ್ಯರು ಕ್ಯಾನ್ಸರ್ ಕಾಯಿಲೆಯ ಬಗ್ಗೆ ಜೂನ್ 6 ರಂದು ಸರ್ಜರಿ ಮಾಡುವುದಾಗಿ ತಿಳಿಸಿದ್ದರು ಎನ್ನಲಾಗಿದೆ. ಹೀಗಾಗಿ ಸದಾಶಿವ ಶೆಟ್ಟಿ ರವರು ಸರ್ಜರಿಯ ಬಗ್ಗೆ ಹೆದರಿ ಮನೆಯ ಹೊರಗಡೆ ಯಾವುದೋ ಕೀಟ ನಾಶಕ ಔಷಧಿಯನ್ನು ಸೇವಿಸಿ ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ : ಶ್ರೀದತ್ತ ಹೆಬ್ರಿ

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!