ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಹಿಳಾ ಮೋರ್ಚಾದ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಸರಕಾರದ 8 ನೇ ವಾರ್ಷಿಕೋತ್ಸವದ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದ ಪ್ರಯುಕ್ತ ಇಂದು ಟಿಟಿ ರಸ್ತೆಯ ಅಂಗನವಾಡಿಯ ಮಕ್ಕಳಿಗೆ ಅವಶ್ಯವಿರುವ ಚಾಪೆಯನ್ನು ಅಂಗನವಾಡಿ ಶಿಕ್ಷಕಿ ಹಾಗೂ ಸಹಶಿಕ್ಷಕಿಯರ ಸಮ್ಮುಖದಲ್ಲಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಮಹಿಳಾ ಮೋರ್ಚಾ ಅಧ್ಯಕ್ಷೆ ರೂಪಾ ಪೈ, ಪ್ರಧಾನ ಕಾರ್ಯದರ್ಶಿಗಳಾದ ಸೌರಭಿ ಪೈ, ಅನಿತಾ ಶ್ರೀಧರ್, ಪುರಸಭಾ ಅಧ್ಯಕ್ಷೆ ವೀಣಾ ಭಾಸ್ಕರ್, ಕುಂದಾಪುರ ಶಕ್ತಿಕೇಂದ್ರ ಮಹಿಳಾ ಮೋರ್ಚಾ ಅಧ್ಯಕ್ಷೆ ಪುಷ್ಪಾ ಶೇಟ್, ಮಂಡಲ ಕಾರ್ಯದರ್ಶಿ ಸುರೇಂದ್ರ ಸಂಗಮ್, ಮಂಡಲ ಯುವಮೋರ್ಚಾ ಉಪಾಧ್ಯಕ್ಷ ಅಭಿಷೇಕ ಅಂಕದಕಟ್ಟೆ, ಪಕ್ಷದ ಪ್ರಮುಖರಾದ ಬಾಬು ಪೈ ಉಪಸ್ಥಿತರಿದ್ದರು
Advertisement. Scroll to continue reading.