ಹೈದರಾಬಾದ್ : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮತ್ತೆ ಸೆಟ್ ಮರಳಿದ್ದಾರೆ ಎಂದು ತಿಳಿದು ಬಂದಿದೆ.
ತಮ್ಮ ಮುಂಬರುವ ಚಿತ್ರ ಪ್ರಾಜೆಕ್ಟ್ ಕೆ ಚಿತ್ರೀಕರಣಕ್ಕಾಗಿ ಹೈದರಾಬಾದ್ ನಲ್ಲಿರುವ ನಟಿಯ ಹೃದಯ ಬಡಿತ ಹೆಚ್ಚಾಗಿ ನಂತರ ಅಸ್ವಸ್ಥಗೊಂಡಿದ್ದರು ಎನ್ನಲಾಗಿದೆ. ತಕ್ಷಣವೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ನಟಿ ದೀಪಿಕಾ ಪಡುಕೋಣೆಯನ್ನು ಪರೀಕ್ಷಿಸಿದರು. ಚಿಕಿತ್ಸೆಯ ನಂತರ, ದೀಪಿಕಾ ತನ್ನ ಹೃದಯ ಬಡಿತ ಸ್ಥಿರವಾಗುತ್ತಿದ್ದಂತೆ ಅಮಿತಾಬ್ ಬಚ್ಚನ್ ಅವರೊಂದಿಗೆ ಚಿತ್ರೀಕರಣಕ್ಕಾಗಿ ಸೆಟ್ ಗೆ ಮರಳಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಭಾಸ್ ಅವರೊಂದಿಗೆ ದೀಪಿಕಾ ಇದೇ ಮೊದಲ ಬಾರಿಗೆ ಪ್ರಾಜೆಕ್ಟ್ ಕೆ ಚಿತ್ರದಲ್ಲಿ ತೆರೆ ಹಂಚಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
Advertisement. Scroll to continue reading.
In this article:Bollywood star, Deepika Padukone, diksoochi nes, diksoochi Tv, diksoochi udupi
Click to comment