ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ರಾಜ್ಯ ಸರಕಾರದ ಕಂದಾಯ ಇಲಾಖೆ ವತಿಯಿಂದ ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಬ್ರಹ್ಮಾವರ ತಾಲೂಕು ನೇತೃತ್ವದಲ್ಲಿ ಜೂ. 18 ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆಗೆ ಕಾರ್ಯಕ್ರಮ ಜರುಗಲಿದೆ ಎಂದು ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ ಮೂರ್ತಿ ಗುರುವಾರ ಬ್ರಹ್ಮಾವರ ತಾಲೂಕು ಕಛೇರಿಯಲ್ಲಿ ಜರುಗಿದ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.
ಅಂದು ಬೆಳಿಗ್ಗೆ 10 ಗಂಟೆಗೆ ಚೇರ್ಕಾಡಿ ಯುವಕ ಮಂಡಲದಲ್ಲಿ ಚೇರ್ಕಾಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ರೇಖಾ ಭಟ್ ಅಧ್ಯಕ್ಷತೆಯಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.
ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ನ್ಯಾಯಾಧೀಶೆ ಶರ್ಮಿಳಾ , ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಪ್ರಸನ್ನ ಎಚ್ , ಚೇರ್ಕಾಡಿ ಗ್ರಾಮಪಂಚಾಯತಿ ಉಪಾಧ್ಯಕ್ಷ ಕಿಟ್ಟಪ್ಪ ಅಮೀನ್ , ಉಡುಪಿ ವೈಕುಂಠ ಬಾಳಿಗಾ ಕಾನೂನು ವಿದ್ಯಾಲಯದ ಪ್ರಾಂಶುಪಾಲೆ ನಿರ್ಮಲ ಉಪಸ್ಥಿತರಿರಲಿದ್ದಾರೆ.
ಅಂದು ಜಿಲ್ಲಾಧಿಕಾರಿಗಳೊಂದಿಗೆ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಜರಿದ್ದು ಸಾರ್ವಜನಿಕರ ಅವಹಾಲು ಗಳನ್ನು ಸ್ವೀಕರಿಸಿ ಕಂದಾಯ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಯ ಸಮಸ್ಯೆಯನ್ನು ಇತ್ಯರ್ಥ ಗೊಳಿಸಲಿದ್ದಾರೆ.
ಸಂಜೆ ಪೇತ್ರಿ ಸರಕಾರಿ ಹಿರೀಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಧಿಕಾರಿಗಳು ವಾಸ್ತವ್ಯ ಇದ್ದು ಸಂಜೆ 7 ರಿಂದ 8 ರ ತನಕ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದ್ದು, ಬ್ರಹ್ಮಾವರ ತಾಲೂಕು ಪಂಚಾಯತಿ ಕಾರ್ಯನಿರ್ವಣಾಧಿಕಾರಿ, ಬ್ರಹ್ಮಾವರ ಅರಕ್ಷಕ ಠಾಣೆ, ವೃತ್ತ ನೀರೀಕ್ಷಕ ಅಧಿಕಾರಿಗಳು ಉಪಸ್ಥಿತರಿಲಿದ್ದಾರೆ ಎಂದು ತಿಳಿಸಿದರು.
ಕಂದಾಯ ನೀರೀಕ್ಷಕ ಲಕ್ಷ್ಮೀನಾರಾಯಣ ಭಟ್, ಉಪ ತಹಶೀಲ್ದಾರ ರಾಘವೇಂದ್ರ ಸುದ್ದಿಗೋಷ್ಠಿಯಲ್ಲಿದ್ದರು.