ಹಿರಿಯಡಕ : ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೋಟ್ನಕಟ್ಟೆಯ ಪ್ರಕಾಶ್ ಪೈ ( 67) ಅವರ ಮೃತದೇಹ ಪತ್ತೆಯಾಗಿದೆ. ಕುಕ್ಕೆಹಳ್ಳಿಯ ಹಾಡಿಯೊಂದರಲ್ಲಿ ಅವರ ಶವ ಪತ್ತೆಯಾಗಿದೆ. ಶವದ ಪಕ್ಕದಲ್ಲಿ ವಿಷದ ಬಾಟಲಿಯೂ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಬೊಮ್ಮಾರಬೆಟ್ಟು ಗ್ರಾಮದ ಕೋಟ್ನಕಟ್ಟೆಯ ಬಿ.ಪ್ರಕಾಶ್ ಪೈ ಜೂ.13 ರಂದು ನಾಪತ್ತೆಯಾಗಿದ್ದರು. ಉಡುಪಿ ಸರ್ವೀಸ್ ಬಸ್ ನಿಲ್ದಾಣದ ಬಳಿಯ ಡಾ.ಆರ್.ಎನ್. ಭಟ್ ಕ್ಲಿನಿಕ್ ಗಾಗಿ ಚಿಕಿತ್ಸೆಗೆ ಅವರು ಬಂದಿದ್ದು, ಬಳಿಕ ನಾಪತ್ತೆಯಾಗಿದ್ದರು ಎನ್ನಲಾಗಿದೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Advertisement. Scroll to continue reading.