ವರದಿ : ಬಿ.ಎಸ್.ಆಚಾರ್ಯ
ಉಡುಪಿ : ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ 8 ವರ್ಷ ಯಶಸ್ವಿ ಆಡಳಿತ ಪೂರೈಸಿದ ಹಿನ್ನೆಲೆಯಲ್ಲಿ ಉಡುಪಿ ಗ್ರಾಮಾಂತರ ಬಿಜೆಪಿ ವತಿಯಿಂದ ಇಂದು ವಿಕಾಸ್ ತೀರ್ಥ ಬೈಕ್ ರ್ಯಾಲಿ ನಡೆಯಿತು. ಈ ವೇಳೆ ಶಾಸಕ ಕೆ.ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜೊತೆಯಾಗಿ ಬೈಕ್ ರ್ಯಾಲಿ ಮಾಡಿದ್ದು ವಿಶೇಷ.
ಬ್ರಹ್ಮಾವರ ಬಿಜೆಪಿ ಕಚೇರಿಯಿಂದ ವಿಕಾಸ್ ತೀರ್ಥ ಬೈಕ್ ರ್ಯಾಲಿಗೆ ಚಾಲನೆ ನೀಡಲಾಯಿತು. ಶಾಸಕ ಕೆ. ರಘುಪತಿ ಭಟ್ ರವರು ಬ್ರಹ್ಮಾವರದಿಂದ ಸಂತೆಕಟ್ಟೆ ವರೆಗೆ ಬುಲೆಟ್ ಚಲಾಯಿಸಿ ರ್ಯಾಲಿಯಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಶ್ರೀಶ ನಾಯಕ್, ಗ್ರಾಮಾಂತರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಣೇಶ್ ಸೂರಾಲು, ರಾಜ್ಯ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಶ್ವೇತಾ ಪೂಜಾರಿ, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಣೇಶ್ ಕುಲಾಲ್, ಸಚಿನ್ ಪೂಜಾರಿ, ಗ್ರಾಮಾಂತರ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅರ್ಜುನ್ ಪ್ರಭು ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.