ಕಾಬೂಲ್ : ಅಫ್ಘಾನಿಸ್ತಾನದಲ್ಲಿ ಇಂದು ಬೆಳ್ಳಂಬೆಳಗ್ಗೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ರಷ್ಟು ತೀವ್ರತೆ ದಾಖಲಾಗಿದೆ ಎಂದು ತಿಳಿದುಬಂದಿದೆ.
ಭೂಕಂಪನದಲ್ಲಿ 250 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಆಗ್ನೇಯ ಅಫ್ಘಾನಿಸ್ತಾನದ ಖೋಸ್ಟ್ ನಗರದಿಂದ 51 ಕಿ.ಮೀ ಆಳದಲ್ಲಿ ಸುಮಾರು 44 ಕಿ.ಮೀ (27 ಮೈಲಿ) ದೂರದಲ್ಲಿ ಭೂಕಂಪ ಸಂಭವಿಸಿದೆ.
Advertisement. Scroll to continue reading.
ಅಫ್ಘಾನಿಸ್ತಾನದ ಪಕ್ಟಿಕಾ ಪ್ರಾಂತ್ಯದಲ್ಲಿ 100 ಜನರು ಸಾವನ್ನಪ್ಪಿದ್ದಾರೆ ಮತ್ತು 250 ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಆಡಳಿತದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ ಮೊಹಮ್ಮದ್ ನಾಸಿಮ್ ಹಕ್ಕಾನಿ ಮಾಹಿತಿ ನೀಡಿದ್ದಾರೆ.
ಅಫ್ಘಾನಿಸ್ತಾನದ ಪೂರ್ವ ಪ್ರಾಂತ್ಯಗಳಾದ ನಂಗರ್‌ಹಾರ್ ಮತ್ತು ಖೋಸ್ಟ್‌ನಲ್ಲಿಯೂ ಸಹ ಸಾವುಗಳು ಸಂಭವಿಸಿರುವ ಬಗ್ಗೆ ವರದಿಯಾಗಿದೆ.
Advertisement. Scroll to continue reading.
In this article:Afghanistan, Diksoochi news, diksoochi Tv, diksoochi udupi, earth quake
Click to comment