ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ: ಹನೆಹಳ್ಳಿ ಗ್ರಾಮ ಪಂಚಾಯತ್ ನ ಬಟ್ಟೆಕುದ್ರು ಸಂಜೀವಿನಿ ಒಕ್ಕೂಟದ ಬಿ.ಸಿ.ಸಖಿ ಸುಹಾಸಿನಿ ಗ್ರಾಮ ಒನ್ ಸೆಂಟರ್ ಆರಂಭಗೊಂಡಿತು.
ಕಛೇರಿ ಉಧ್ಘಾಟಿಸಿ ಮಾತನಾಡಿದ ಬ್ರಹ್ಮಾವರ ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿ ಇಬ್ರಾಹಿಂಪುರ್, ಸರಕಾರದ ಈ ಮಹತ್ವಾಕಾಂಕ್ಷಿ ಯೋಜನೆಯ ಪ್ರಯೋಜನ ಸಮಸ್ತ ನಾಗರೀಕರಿಗೂ ತಲುಪಲಿ ಎಂದು ಆಶಿಸಿ ಶುಭ ಹಾರೈಸಿದರು.

ಜಿಲ್ಲಾ ಪಂಚಾಯತ್ ನ ಏಕ ವ್ಯಕ್ತಿ ಸಮಾಲೋಚಕ ಪಾಂಡುರಂಗ ಸೆಂಟರ್ ನಲ್ಲಿ ಸಿಗುವ ಸೌಲಭ್ಯಗಳ ಕುರಿತು ವಿವರಿಸಿದರು. ಸಭಾಧ್ಯಕ್ಷತೆ ವಹಿಸಿದ್ದ ಹನೆಹಳ್ಳಿ ಗ್ರಾಮ ಪಂಚಾಯತ್ ನ ಅಧ್ಯಕ್ಷ ಚಂದ್ರಶೇಖರ್ ಸೆಂಟರ್ ನ ಸವಲತ್ತುಗಳು ಮಹಿಳೆಯರ ಮೂಲಕ ಪ್ರತಿಯೊಬ್ಬರ ಮನೆಗಳನ್ನು ತಲುಪಲಿ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಪ್ರೇಮಲತಾ, ಎನ್.ಆರ್.ಎಲ್.ಎಂ.ನ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಕೃಷ್ಣ, ಯುವ ವೃತ್ತಿಪರರಾದ ಸಮಂತ್, ಒಕ್ಕೂಟದ ಪದಾಧಿಕಾರಿಗಳು ಸೇರಿದಂತೆ ಸದಸ್ಯರುಗಳು ಉಪಸ್ಥಿತರಿದ್ದರು.
ಒಕ್ಕೂಟದ ಕಾರ್ಯದರ್ಶಿ ವೀಣಾ ಪ್ರಾರ್ಥಿಸಿದರು. ನಿವೃತ್ತ ಮುಖ್ಯೋಪಧ್ಯಾಯರಾದ ಸುಧಾಕರ್ ಕಾರ್ಯಕ್ರಮ ನಿರೂಪಿಸಿದರು.
