ಬೆಂಗಳೂರು : ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಇನ್ನು ಮುಂದೆ ‘ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ’, ಎಂದು ಹೆಸರು ಬದಲಾವಣೆ ಮಾಡಿ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಯವರು ಆದೇಶ ಹೊರಡಿಸಿದ್ದಾರೆ.
ದೇಶದ ಬಹುತೇಕ ಎಲ್ಲಾ ರಾಜ್ಯಗಳಲ್ಲಿ 12 ನೇ ತರಗತಿ ತನಕ ಶಿಕ್ಷಣವು ಶಾಲಾ ಶಿಕ್ಷಣವು ವ್ಯಾಪ್ತಿಗೊಳಡಪಡುತ್ತದೆ.
ರಾಷ್ಟ್ರೀಯ ಶಿಕ್ಷಣ ಪಾಲಿಸಿ 2020 ರಲ್ಲಿಯೂ ಸಹ ಸದರಿ ಅಂಶವನ್ನು ಉಲ್ಲೇಖ ಮಾಡಲಾಗಿದ್ದು, ಈ ಹಿನ್ನಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ, ಸಾರ್ವಜನಿಕ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಒಳಗೊಂಡಂತೆ, ಪದನಾಮವನ್ನು ಶಾಲಾ ಶಿಕ್ಷಣ ಇಲಾಖೆ ಅಂತ ಬದಲಾಯಿಸುವುದು ಸೂಕ್ತ ಅಂತ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಈ ಹಿನ್ನಲೆಯಲ್ಲಿ ಈಗಾಗಲೇ ಕೇಂದ್ರ ಸರ್ಕಾರ ಹಾಗೂ ಹೆಚ್ಚಿನ ರಾಜ್ಯಗಳಲ್ಲಿ ಶಾಲಾ ಶಿಕ್ಷಣ ಇಲಾಖೆ ಹೆಚ್ಚು ಬಳಕೆಯಲ್ಲಿ ಇರುವುದರಿಂದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಇನ್ಮುಂದೆ ‘ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ’ ಮರು ನಾಮಕರಣ ಮಾಡುವುದಾಗಿ ಆದೇಶದಲ್ಲಿ ತಿಳಿಸಿದೆ.
