Connect with us

Hi, what are you looking for?

Diksoochi News

ಕರಾವಳಿ

ಕಾಪು: ತಾಲೂಕಿನ ಫಲಾನುಭವಿಗಳಿಗೆ ವಿವಿಧ ಸಾಧನ ಸಲಕರಣೆಗಳ ವಿತರಣೆ

1

ಕಾಪು: ಕಾಪು ಪುರಸಭೆ ವ್ಯಾಪ್ತಿ ಹಾಗೂ ತಾಲೂಕಿನ ಫಲಾನುಭವಿಗಳಿಗೆ ವಿವಿಧ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮ ಶಾಸಕ ಲಾಲಾಜಿ ಆರ್. ಮೆಂಡನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭ ಮಾತನಾಡಿದ ಅವರು, ಕಾಪು ಪುರಸಭಾ ವ್ಯಾಪ್ತಿಯಲ್ಲಿ ಆದ್ಯತೆಯ ಮೇರೆಗೆ ಮನೆ ನಿವೇಶನ ಮತ್ತು ಅನುದಾನ ಮಂಜೂರಾತಿ ಪತ್ರ ನೀಡಲಾಗಿದೆ. ದಿವ್ಯಾಂಗರ ಸಮಸ್ಯೆಗೆ ಸ್ಪಂದಿಸಿ ಸಹಕಾರ ನೀಡಲಾಗುತ್ತಿದೆ. ಇದಕ್ಕಾಗಿ ಪುರಸಭೆಯ ಮೀಸಲು ಹಣವನ್ನು ಬಳಸಿಕೊಳ್ಳಲಾಗುತ್ತಿದ್ದು, ಆದ್ಯತೆಯ ಮೇರೆಗೆ ಸವಲತ್ತು ವಿತರಣೆ ಮಾಡಲಾಗಿದೆ ಎಂದರು.


ಕಾಪು ಪುರಸಭೆಗೆ ನಗರೋತ್ಥಾನ ಯೋಜನೆಯಡಿ 10 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಟೆಂಡರ್ ಹಂತದಲ್ಲಿದೆ. 56 ಕೋಟಿ ರೂಪಾಯಿ ವೆಚ್ಚದಲ್ಲಿ ಕುರ್ಕಾಲು ಡ್ಯಾಂನಿಂದ ಕಾಪು ನಗರಕ್ಕೆ ಕುಡಿಯುವ ನೀರು ಪೂರೈಕೆ ಕಾಮಗಾರಿ ಪ್ರಗತಿಯಲ್ಲಿದೆ ಎಂದರು. ಬೆಳಪು ಅತ್ಯಾಧುನಿಕ ವಿಜ್ಞಾನ ತಂತ್ರಜ್ಞಾನ ಕೇಂದ್ರದ ಕಾಮಗಾರಿ ಪ್ರಗತಿಯಲ್ಲಿದ್ದು, ಹೆಚ್ಚುವರಿ 15 ಕೋಟಿ ರೂ.ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಾಪು ಕ್ಷೇತ್ರದ ಐಟಿಐ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!