ಕಲಬುರಗಿ : ಕ್ರೂಸರ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತೆಲಂಗಾಣ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಕಮಲಾಪುರ ತಾಲೂಕಿನ ಭೀಮನಾಳ ಕ್ರಾಸ್ ಬಳಿ ನಡೆದಿದೆ
ತೆಲಂಗಾಣದ ಹನುಮಕೊಂಡಾ ನಗರದ ಉಜಲಿಬೇಸ ನಿವಾಸಿ ಮಹಮ್ಮದ್ ಅಬ್ದುಲ್ ಮಜೀದ ಸಿದ್ಧಿಕಿ (71), ಹೈದರಾಬಾದ್ನ ಬಾಲಾಜಿ ನಗರದ ಸಾದಯಾ ಖುನ್ನಿಸಾ ಬೇಗಂ (55) ಮೃತಪಟ್ಟವರು.
ಘಟನೆಯಲ್ಲಿ ಕಾರಿನಲ್ಲಿದ್ದ ಹಾಗೂ ಕ್ರೂಸರ್ ನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಕಲಬುರಗಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Advertisement. Scroll to continue reading.
ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.