Connect with us

Hi, what are you looking for?

Diksoochi News

ಸಿನಿಮಾ

ಕಾಳಿ ಮಾತೆಗೆ ಅವಮಾನ : ನಿರ್ದೇಶಕಿ ಲೀನಾ ಮಣಿಮೇಕಲೈ ವಿರುದ್ಧ ದೂರು ದಾಖಲು

1

ಸಿನಿಮಾ : ‘ಕಾಳಿ’ ಸಾಕ್ಷ್ಯಚಿತ್ರದ ಪೋಸ್ಟರ್ ವಿರುದ್ಧ ಈಗಾಗಲೇ ಆಕ್ರೋಶ ಕೇಳಿ ಬಂದಿದೆ. ಈ ಸಂಬಂಧ ನಿರ್ದೇಶಕಿ ಲೀನಾ ಮಣಿಮೇಕಲೈ ವಿರುದ್ಧ ದೂರು ದಾಖಲಾಗಿದೆ.

‘ಅತ್ಯಂತ ಆಕ್ಷೇಪಾರ್ಹ’ ಪೋಸ್ಟರ್‌ ಮೂಲಕ ಧಾರ್ಮಿಕ ಭಾವನೆಗಳನ್ನ ನೋಯಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ದೆಹಲಿ ಮೂಲದ ವಕೀಲ ವಿನೀತ್ ಜಿಂದಾಲ್ ಜುಲೈ 2 ರಂದು ಲೀನಾ ಹಂಚಿಕೊಂಡ ವಿವಾದಾತ್ಮಕ ಪೋಸ್ಟರ್‌ಗೆ ಸಂಬಂಧಿಸಿದಂತೆ ಆಕೆಯ ವಿರುದ್ಧ ದೂರು ದಾಖಲಿಸಿದ್ದಾರೆ.

Advertisement. Scroll to continue reading.

ಸಾಕ್ಷ್ಯಚಿತ್ರದ ಆಕ್ಷೇಪಾರ್ಹ ಫೋಟೋ ಮತ್ತು ಕ್ಲಿಪ್ ನಿಷೇಧಿಸಬೇಕೆಂದು ಅವರು ಒತ್ತಾಯಿಸಿದ್ದು, ಕಾಳಿ ದೇವಿಯ ವೇಷ ಧರಿಸಿದ ಮಹಿಳೆ ಸಿಗರೇಟು ಸೇದುತ್ತಿರುವ ಪೋಸ್ಟರ್ ಹಿಂದೂ ಸಮುದಾಯದ ಭಾವನೆಗಳು ಮತ್ತು ನಂಬಿಕೆಗಳಿಗೆ ನೋವುಂಟು ಮಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಪೋಸ್ಟರ್ ಬಗ್ಗೆ ಟ್ವೀಟ್ ಮೂಲಕ ವಕೀಲ ವಿನೀತ್ ಮಾಹಿತಿ ನೀಡಿದ್ದು, ‘ಕಾಳಿ ಮಾತೆಯ ಕುರಿತ ಆಕ್ಷೇಪಾರ್ಹ ಕ್ಲಿಪ್ ಮತ್ತು ಫೋಟೋಗಾಗಿ ಲೀನಾ ಮಣಿಮೇಕಲೈ ವಿರುದ್ಧ ದೆಹಲಿ ಡಿಸಿಪಿಗೆ ದೂರು ದಾಖಲಿಸಿದ್ದಾರೆ. ಹಿಂದೂ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಈ ಕಾನೂನುಬಾಹಿರ ಕೃತ್ಯವನ್ನ ಮಾಡಿದ್ದಕ್ಕಾಗಿ ಲೀನಾ ಮಣಿಮೇಕಲೈ ಪರಿಣಾಮಗಳನ್ನ ಎದುರಿಸಬೇಕಾಗುತ್ತದೆ’ ಎಂದು ಅವರು ಹೇಳಿದ್ದಾರೆ.

ತಮಿಳುನಾಡಿನ ಲೀನಾ ಮಣಿಮೇಕಲೈ ಅವರು ‘ಕಾಳಿ‘ ಎಂಬ ಸಾಕ್ಷ್ಯಚಿತ್ರ ನಿರ್ಮಾಣ ಮಾಡಿದ್ದು, ಶನಿವಾರ ಅವರು ಈ ಸಾಕ್ಷ್ಯಚಿತ್ರದ ಪೋಸ್ಟರ್‌ ಅನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ಹಿಂದೂ ದೇವತೆ ಕಾಳಿ ಮಾತೆ ಸಿಗರೇಟ್ ಸೇದುತ್ತಿರುವಂತೆ ತೋರಿಸಲಾಗಿದೆ. ಈ ಬಗ್ಗೆ ಆಕ್ರೋಶ ಕೇಳಿ ಬಂದಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

1 ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ.ನೇಹಾ ಹಿರೇಮಠ ಹತ್ಯೆಯಾದ ವಿದ್ಯಾರ್ಥಿನಿ. ಕಾಲೇಜ್ ಕ್ಯಾಂಪಸ್ ನಲ್ಲಿರುವ ಕ್ಯಾಂಟೀನ್ ನಲ್ಲಿ...

error: Content is protected !!