ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಎರಡು ದಿನಗಳ ಕಾಲ ಶಾಲೆ – ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ, ಮಳೆಯ ಆರ್ಭಟ ಹೆಚ್ಚಾಗಿದ್ದು, ಮತ್ತೆ ಎರಡು ದಿನ ರಜೆ ಘೋಷಿಸಲಾಗಿದೆ.
ಹಾಗಾಗಿ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಸರಕಾರಿ/ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ಜು.8, 9 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
Advertisement. Scroll to continue reading.