ಬ್ರಿಟನ್ : ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ ನೀಡಿದ ಒಂದು ದಿನದ ನಂತರ ಬ್ರಿಟನ್‌ನ ಮಾಜಿ ಹಣಕಾಸು ಸಚಿವ ರಿಷಿ ಸುನಕ್ ಅವರು ಶುಕ್ರವಾರ ಬ್ರಿಟನ್‌ನ ಮುಂದಿನ ಪ್ರಧಾನಿಯಾಗಿ ನಿಲ್ಲುವುದಾಗಿ ಘೋಷಿಸಿದ್ದಾರೆ.
ಈ ಬಗ್ಗೆ ಅವರು ಟ್ವೀಟ್ ಮಾಡುವ ಮೂಲಕ ದೃಢಪಡಿಸಿದ್ದಾರೆ. ‘ಕನ್ಸರ್ವೇಟಿವ್ ಪಕ್ಷದ ಮುಂದಿನ ನಾಯಕ ಮತ್ತು ನಿಮ್ಮ ಪ್ರಧಾನಿಯಾಗಲು ನಾನು ಸ್ಪರ್ಧಿಸುತ್ತೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಮಂಗಳವಾರ ಸುನಕ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಜಾನ್ಸನ್ ರಾಜೀನಾಮೆ ನೀಡಿದ್ದರು.
Advertisement. Scroll to continue reading.

ವರದಿಗಳ ಪ್ರಕಾರ, ಟೋರಿ ಸಂಸದ ಟಾಮ್ ಟುಗೆಂಧತ್, ಅಟಾರ್ನಿ ಜನರಲ್ ಸುಯೆಲ್ಲಾ ಬ್ರೇವರ್ಮನ್ ಮತ್ತು ಬ್ರೆಕ್ಸಿಟ್ ಪರ ಸಂಸದ ಸ್ಟೀವ್ ಬೇಕರ್ ಪ್ರಧಾನಿ ಸ್ಥಾನದ ಆಕಾಂಕ್ಷಿಗಳು ಎಂದು ಬ್ರಿಟನ್ ಮೂಲದ ಬಿಬಿಸಿ ವರದಿ ಮಾಡಿದೆ.
In this article:Britain, Diksoochi news, diksoochi Tv, diksoochi udupi, Rishi Sunak

Click to comment