ಲಖನೌ : ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಪತ್ನಿ ಸಾಧನಾ ಗುಪ್ತಾ ಶನಿವಾರ ನಿಧನರಾಗಿದ್ದಾರೆ.
ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ, ಸ್ಥಿತಿ ಚಿಂತಾಜನಕವಾಗಿತ್ತು. ಕಳೆದ ನಾಲ್ಕು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿತ್ತು. ಇಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
Advertisement. Scroll to continue reading.

ಸಾಧನಾ ಗುಪ್ತಾ ಅವರು ಮುಲಾಯಂ ಸಿಂಗ್ ಯಾದವ್ರ 2ನೇ ಪತ್ನಿಯಾಗಿದ್ದರು. ಮುಲಾಯಂ ಸಿಂಗ್ ಯಾದವ್ ಅವರ ಮೊದಲ ಪತ್ನಿ ಮತ್ತು ಅಖಿಲೇಶ್ ಯಾದವ್ ಅವರ ತಾಯಿ ಮಾಲ್ತಿ ಯಾದವ್ 2003 ರಲ್ಲಿ ನಿಧನರಾಗಿದ್ದರು. ಆನಂತರ ಸಾಧನಾ ಗುಪ್ತಾ ಮುಲಾಯಂ ಸಿಂಗ್ ಯಾದವ್ ಅವರನ್ನು ವಿವಾಹವಾಗಿದ್ದರು. ಅವರು ಬಿಜೆಪಿ ನಾಯಕಿ ಅಪರ್ಣಾ ಯಾದವ್ ಅವರ ಅತ್ತೆ ಮತ್ತು ಪ್ರತೀಕ್ ಯಾದವ್ ಅವರ ತಾಯಿ.
In this article:Diksoochi news, diksoochi Tv, diksoochi udupi, Sadhna Gupta, Samajwadi Party patriarch Mulayam Singh Yadav

Click to comment