ಚೊಚ್ಚಲ ನಿರ್ದೇಶನದ ಚಿತ್ರಕ್ಕೆ ಶಿವಣ್ಣಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಅರ್ಜುನ್ ಜನ್ಯಾ; ಟೈಟಲ್ ಅನೌನ್ಸ್
Published
1
ಬೆಂಗಳೂರು : ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಮೊದಲ ಬಾರಿಗೆ ನಿರ್ದೇಶಕನ ಟೋಪಿ ಹಾಕಲು ಸಿದ್ಧರಾಗಿದ್ದಾರೆ. ಅದೂ ಶಿವಣ್ಣ ಅವರಿಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಇಂದು ಶಿವಣ್ಣ ಬರ್ತ್ ಡೇ ಪ್ರಯುಕ್ತ ಸಿನಿಮಾದ ಟೈಟಲ್ ಘೋಷಣೆಯಾಗಿದೆ.
ಈ ಸಿನಿಮಾಗೆ ’45’ ಎಂಬ ವಿಶಿಷ್ಟ ಟೈಟಲ್ ಇಡಲಾಗಿದೆ.
ಈ ಸಿನಿಮಾ ಕೇವಲ ಕನ್ನಡದಲ್ಲಿ ಮಾತ್ರವಲ್ಲ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲೂ ರಿಲೀಸ್ ಆಗಲಿದೆ. ಎಂ. ರಮೇಶ್ ರೆಡ್ಡಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಇಂದು ಬೆಳಿಗ್ಗೆ ಮಲಯಾಳಂನಲ್ಲಿ ನಟ ಪೃಥ್ವಿರಾಜ್ ಸುಕುಮಾರನ್, ತೆಲುಗಿನಲ್ಲಿ ನಾಗಾರ್ಜುನ ಅಕ್ಕಿನೇನಿ ಮತ್ತು ತಮಿಳಿನಲ್ಲಿ ಶಿವ ಕಾರ್ತಿಕೇಯನ್ ಶೀರ್ಷಿಕೆ ಅನಾವರಣಗೊಳಿಸಿದ್ದಾರೆ.