ಹಾಸನ : ಶಿರಾಡಿ ಘಾಟ್ ನಲ್ಲಿ ಈಗ ಮತ್ತೆ ಭೂಸಿತವಾಗಿದೆ. ಪರಿಣಾಮ ಭಾರೀ ವಾಹನಗಳ ಸಂಚಾರವನ್ನು ನಿಷೇಧಗೊಳಿಸಿ ಜಿಲ್ಲಾಡಳಿತ ಆದೇಶಿಸಿದೆ.
ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪದ ವಾರದ ಹಿಂದೆ ಅಲ್ಪ ಪ್ರಮಾಣದಲ್ಲಿ ರಸ್ತೆ ಕುಸಿತಗೊಂಡಿದ್ದ ಕಾರಣ, ಅದರ ರಿಪೇರಿ ಕಾರ್ಯ ನಡೆಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತದಿಂದ ಶಿರಾಡಿ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿದೆ.
ರಸ್ತೆ ಕುಸಿತಗೊಂಡಿದ್ದಂತ ಸ್ಥಳಕ್ಕೆ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು. ಆ ಬಳಿಕ ನಾಲ್ಕೇ ದಿನಕ್ಕೆ ಮತ್ತೆ ಭೂ ಕುಸಿತಗೊಂಡಿದೆ. ಕಳೆದ ವರ್ಷ ಕೂಡ ಇದೇ ಸ್ಥಳದಲ್ಲಿ ಭೂ ಕುಸಿತಗೊಂಡಿತ್ತು.
Advertisement. Scroll to continue reading.