Connect with us

Hi, what are you looking for?

Diksoochi News

ಸಿನಿಮಾ

ನಟ ಕಿಚ್ಚ ಸುದೀಪ್ ಗೆ ಕೊರೋನಾ ಸೋಂಕು ದೃಢ

0

ಚಂದನವನ : ನಟ ಕಿಚ್ಚ ಸುದೀಪ್‌ಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ವರದಿಯಾಗಿದೆ. ವಿಕ್ರಾಂತ್ ರೋಣ ಸ್ಟಾರ್ ಸುದೀಪ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಅವರಿಗೆ ಕೊರೊನಾ ಸೋಂಕು ತಗುಲುತ್ತಿರುವುದು ಇದು ಎರಡನೇ ಬಾರಿ. ಕಳೆದ ವರ್ಷ ಕೊರೊನಾ ಹಾವಳಿ ಹೆಚ್ಚಿದ್ದ ಸಮಯದಲ್ಲಿ ಸುದೀಪ್ ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಈ ವೇಳೆ ಕೊರೊನಾಗೆ ಚಿಕಿತ್ಸೆ ಪಡೆದು ಮನೆಯಲ್ಲೇ ವಿಶ್ರಾಂತಿ ಪಡೆದಿದ್ದರು.

ಇದೀಗ ಮತ್ತೊಮ್ಮೆ ಸೋಂಕು ತಗುಲಿದೆ. ಸದ್ಯ ಕಿಚ್ಚ ಚಿಕಿತ್ಸೆ ಪಡೆದು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಸುದೀಪ್ ನಟನೆಯ ಬಹುನಿರೀಕ್ಷೆಯ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಗೆ ದಿನಗಣನೆ ಪ್ರಾರಂಭವಾಗಿದೆ.

Advertisement. Scroll to continue reading.

ಇದೇ ತಿಂಗಳ 28 ರಂದು ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ವಿಕ್ರಾಂತ್ ರೋಣ ರಿಲೀಸ್ ಆಗುತ್ತಿದೆ. ಕಳೆದ ಒಂದು ತಿಂಗಳಿಂದ ಪ್ರಚಾರ ಕಾರ್ಯದಲ್ಲಿ ಸುದೀಪ್ ಭಾಗಿಯಾಗಿದ್ದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!