ವರದಿ : ದಿನೇಶ್ ರಾಯಪ್ಪನಮಠ
ಶಿವಮೊಗ್ಗ
: ಲೋಕಸಭಾ ಕ್ಷೇತ್ರ ಬೈಂದೂರು ವಿಧಾನಸಭಾ ಕ್ಷೇತ್ರದ ಗಂಗೊಳ್ಳಿಯಲ್ಲಿ ಸುಮಾರು ರೂ 100 ಕೋಟಿ ವೆಚ್ಚದಲ್ಲಿ ಕೋಸ್ಟಲ್ ಬರ್ತ್ (Coastal Berth) ನಿರ್ಮಿಸಲು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಸಚಿವರಾದ ಸರ್ಬಾನಂದ ಸೋನೋವಾಲ ಅವರು ಸಮ್ಮತಿಸಿದ್ದಾರೆ.
ಕೋಸ್ಟಲ್ ಬರ್ತ್ ನಿರ್ಮಾಣದಿಂದ ಮತ್ಸೋದ್ಯಮಕ್ಕೆ ಪೂರಕ ವಾತಾವರಣ ಸಿಗಲಿದೆ. ಸಾಗರಮಾಲ ಯೋಜನೆಯಲ್ಲಿ ಬಂದರು ಸಂಪರ್ಕ ಕೂಡ ಆಗಲಿದ್ದು, ಮುಂದಿನ ದಿನಗಳಲ್ಲಿ ಗಂಗೊಳ್ಳಿ ಒಂದು ಅತ್ಯುತ್ತಮ ವಾಣಿಜ್ಯ ಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದ್ದಾರೆ.
ಹಾಗೆಯೇ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸಣ್ಣ ಕೈಗಾರಿಕೋದ್ಯಮಗಳನ್ನು ಪ್ರೋತ್ಸಾಹಿಸಲು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮ ನಿಯಮಿತ ಇವರ ವತಿಯಿಂದ ಕೈಗಾರಿಕಾ ವಸಾಹತು (INDUSTRIAL TOWNSHIP) ನಿರ್ಮಿಸಲು ಉಡುಪಿ ಜಿಲ್ಲಾಡಳಿತಕ್ಕೆ ಸ್ಥಳ ಗುರುತು ಮಾಡಲು ವಿನಂತಿಸಲಾಗಿತ್ತು.
ಅದರಂತೆ ಸುಮಾರು 19 ಎಕ್ರೆ ಸ್ಥಳವನ್ನು ಗುರುತಿಸಿ ಕೈಗಾರಿಕಾ ವಸಾಹತು ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ. ಇವುಗಳಿಂದ ಬೈಂದೂರು ವಿಧಾನ ಸಭಾ ಕ್ಷೇತ್ರದಲ್ಲಿ ಸಾವಿರಾರು ಉದ್ಯೋಗ ಸೃಷ್ಠಿಯಾಗಲಿ
ದೆ. ಸದರಿ ಯೋಜನೆಗಳಿಗೆ ಸಹಕರಿಸಿದ ಕೇಂದ್ರ ಹಾಗೂ ರಾಜ್ಯದ ಡಬಲ್ ಇಂಜಿನ್ ಸರಕಾರಗಳಿಗೆ ಸಂಸದ ಬಿ. ವೈ. ರಾಘವೇಂದ್ರ ಧನ್ಯವಾದ ತಿಳಿಸಿದ್ದಾರೆ.