Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ನಿಟ್ಟೂರು ಪ್ರೌಢಶಾಲಾ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ

0

ಉಡುಪಿ : ನಿಟ್ಟೂರು ಪ್ರೌಢ ಶಾಲಾ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ ಶಾಲೆಯ ಸಭಾಂಗಣದಲ್ಲಿ ಜರಗಿತು. ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಮುರಲಿ ಕಡೆಕಾರ್ ಪೋಷಕರನ್ನು ಕುರಿತು ಮಾತನಾಡುತ್ತಾ, ವಿದ್ಯಾರ್ಥಿಗಳ ಕಲಿಕೆಯಲ್ಲಿ ಶಿಕ್ಷಕರಷ್ಟೇ ಪೋಷಕರ ಪಾತ್ರ ಮಹತ್ತರವಾದದ್ದು. ಹೆತ್ತವರು ಪ್ರತಿ ದಿನ ತಮ್ಮ ಮಕ್ಕಳಿಗೆ ನಿಗದಿತ ಸಮಯವನ್ನು ಮೀಸಲಿಡಬೇಕು. ಇದರಿಂದ ಕಲಿಕೆ ಸುಲಭ ಸಾಧ್ಯವಾಗುತ್ತದೆ ಎಂದರು.
ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗಿಶ್ಚಂದ್ರಾಧರ ಮತ್ತು ಉಪಾಧ್ಯಕ್ಷ ದಿನೇಶ್ ಪೂಜಾರಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಶಾಲೆ ಹಲವು ಚಟುವಟಿಕೆಗಳನ್ನು ಹಮ್ಮಿಕೊಂಡಿದೆ ಎಂದರು.


ಈ ಸಂದರ್ಭದಲ್ಲಿ ಪಿ. ಎಲ್ ಅಣ್ಣಾಜಿ ರಾವ್ ಸ್ಮಾರಕ ಧರ್ಮ ನಿಧಿಯಿಂದ ಕೊಡಲ್ಪಟ್ಟ ಸಹಾಯಧನವನ್ನು ಆಯ್ದ 40 ವಿದ್ಯಾರ್ಥಿಗಳಿಗೆ ತಲಾ ಒಂದು ಸಾವಿರ ರೂಪಾಯಿ ವಿತರಿಸಲಾಯಿತು.
ಎಂಟನೆಯ ತರಗತಿಯ 77 ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿಯ ಜತೆಕಾರ್ಯದರ್ಶಿ ದಿನೇಶ್ ಪೂಜಾರಿಯವರಿಂದ ಕೊಡಲ್ಪಟ್ಟ ಊಟದ ಬಟ್ಟಲುಗಳನ್ನು ವಿತರಿಸಲಾಯಿತು.

ಶಾಲಾ ಹಳೆ ವಿದ್ಯಾರ್ಥಿಗಳಾದ ಶಶಿಧರ ಮೆಲಂಟ ಸಹೋದರರ ಧನ ಸಹಾಯದಿಂದ ಎಂಟನೆಯ ತರಗತಿ ವಿದ್ಯಾರ್ಥಿನಿಯರಿಗೆ ಉಚಿತ ಸಮವಸ್ತ್ರ ನೀಡಲಾಯಿತು.
ಶಾಲಾ ಹಳೆ ವಿದ್ಯಾರ್ಥಿ ಪಿ. ಪರಶುರಾಮ ಶೆಟ್ಟಿ, ನಿವೃತ್ತ ಅಧ್ಯಾಪಕ ಹೆಚ್.ಎನ್. ಶೃಂಗೇಶ್ವರ ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯಿನಿ ಶ್ರೀಮತಿ ಅನಸೂಯಾ ಸ್ವಾಗತಿಸಿದರು. ಶಿಕ್ಷಕ ದೇವದಾಸ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ರಕ್ಷಕ ಸಂಘದ ಸಂಯೋಜಕ ರಾಮದಾಸ್ ನಾಯ್ಕ್ ವಂದಿಸಿದರು.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಷ್ಟ್ರೀಯ

0 ಲಖನೌ: ಉತ್ತರ ಪ್ರದೇಶದ ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರ ಉಮರ್ ಅನ್ಸಾರಿ ಸ್ಫೋಟಕ ಹೇಳಿಕೆ ನೀಡಿದ್ದು, ತಂದೆಯನ್ನು ವಿಷಪ್ರಾಶನ ಮಾಡಿಸಿ, ಸಾವನ್ನಪ್ಪುವಂತೆ ಮಾಡಲಾಗಿದೆ ಎಂದು ಗಂಭೀರ ಆರೋಪ...

ರಾಜ್ಯ

0 ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಇಂತಹವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆಂದು ಕಾಂಗ್ರೆಸ್‌ ಮುಖಂಡ ಯತೀಂದ್ರ...

error: Content is protected !!