ಬಿಹಾರ : ಮನೆಯಲ್ಲಿ ಬಾಂಬ್ ತಯಾರಿಕೆ ವೇಳೆ ಅದು ಸ್ಫೋಟಗೊಂಡು ಓರ್ವ ಮಹಿಳೆ ಸೇರಿ ಆರು ಮಂದಿ ಸಾವನ್ನಪ್ಪಿರುವ ಘಟನೆ ಖೈರಾ ಸಮೀಪದ ಖುದೈಬಾಗ್ ಗ್ರಾಮದಲ್ಲಿ ನಡೆದಿದೆ. ಇನ್ನು ನಾಲ್ವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಮನೆಯಲ್ಲಿ ಪಟಾಕಿ ಮದ್ದಿನಿಂದ ಬಾಂಬ್ ತಯಾರಿಸಲಾಗುತ್ತಿತ್ತು ಎನ್ನಲಾಗಿದೆ. ಈ ವೇಳೆ ಸ್ಫೋಟ ಸಂಭವಿಸಿದೆ. ಈ ಸ್ಫೋಟದಿಂದಾಗಿ ಮನೆಯ ಮೇಲ್ಛಾವಣಿ, ಗೋಡೆಗಳು ಕುಸಿದು ಬಿದ್ದಿವೆ. ಪರಿಣಾಮ ಆರು ಜನರು ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ನಾಲ್ವರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ವರದಿಯಾಗಿದೆ.
ಸ್ಫೋಟದ ತೀವ್ರತೆಗೆ ವ್ಯಕ್ತಿಯೊಬ್ಬರ ದೇಹದ ಭಾಗ ಸುಮಾರು 50 ಮೀಟರ್ ದೂರದಲ್ಲಿ ತೂರಿ ಬಿದ್ದಿದೆ ಎನ್ನಲಾಗಿದೆ. ಈ ಘಟನೆಯ ವಿಷಯ ಪೊಲೀಸರು ಆರು ಅ್ಯಂಬುಲೆನ್ಸ್ಗಳು ಮತ್ತು ಅಗ್ನಿಶಾಮಕದಳದವರು ಅವಶೇಷಗಳ ಸಿಲುಕಿದ್ದ ಆರು ಜನರ ಶವಗಳನ್ನು ಹೊರತೆಗೆಯಲಾಗಿದೆ.
ಮನೆ ನೆಲಸಮಗೊಂಡ ನಂತರವೂ ಸ್ಫೋಟಗಳು ಮುಂದುವರಿದಿದ್ದು, ಘಟನೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.