ಬ್ರಹ್ಮಾವರ : ಅರಣ್ಯ ಇಲಾಖೆ ಉಡುಪಿ ಹಾಗೂ ನೀಲಾವರ ಗ್ರಾಮ ಪಂಚಾಯತ್ ಇದರ ಆಶ್ರಯದಲ್ಲಿ “ವಿಶ್ವ ಪರಿಸರ ದಿನಾಚರಣೆ” ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮಂಗಳವಾರ ನೀಲಾವರ ಗ್ರಾಮ ಪಂಚಾಯತ್ ಬಳಿ ಶಾಸಕ ಕೆ. ರಘುಪತಿ ಭಟ್ ರವರು ಗಿಡ ನೆಟ್ಟು ನೀರೆರೆದರು.
ಈ ಸಂದರ್ಭದಲ್ಲಿ ನೀಲಾವರ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಂದ್ರ ಕುಮಾರ್, ಪಂಚಾಯತ್ ಸದಸ್ಯ ರಮೇಶ್ ಪೂಜಾರಿ, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ, ಬ್ರಹ್ಮಾವರ ತಹಶೀಲ್ದಾರ ರಾಜಶೇಖರ್ ಮೂರ್ತಿ, ಬ್ರಹ್ಮಾವರ ಪೋಲಿಸ್ ಉಪ ನಿರೀಕ್ಷಕ ಗುರುನಾಥ್ ಹಾದಿಮನೆ, ಅರಣ್ಯ ಅಧಿಕಾರಿ ಹರೀಶ್ ಉಪಸ್ಥಿತರಿದ್ದರು.