ಮಂಗಳೂರು : ದ.ಕ ಜಿಲ್ಲೆಯ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ಶಶಿಕುಮಾರ್ ಆದೇಶಿಸಿದ್ದಾರೆ.
ಸುರತ್ಕಲ್, ಮೂಲ್ಕಿ, ಬಜ್ಪೆ, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಆದೇಶಿಸಲಾಗಿದೆ.
ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಇದೀಗ ಸುರತ್ಕಲ್‌ನಲ್ಲಿ ಫಾಜಿಲ್ ಎಂಬಾತನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಹೀಗಾಗಿ ಮುಂಜಾಗೃತಾ ಕ್ರಮವಾಗಿ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
Advertisement. Scroll to continue reading.