ಮಂಗಳೂರು : ಜಿಲ್ಲಾ ಆಡಳಿತ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯ ರೋಗ ಮತ್ತು ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾರಾಗೃಹ ಮಂಗಳೂರು, ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ ಬೆಂಗಳೂರು, ಸ್ವಾಮಿ ವಿವೇಕಾನಂದ ಯೂತ್ ಮುಮೇಂಟ್ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹೆಪಟೈಟಿಸ್ ದಿನವನ್ನು ಜಿಲ್ಲಾ ಕಾರಾಗೃಹದಲ್ಲಿ ಆರೋಗ್ಯ ತಪಾಸಣೆ ಮತ್ತು ಮಾಹಿತಿ ಶಿಬಿರ ನಡೆಯಿತು.
ಜಿಲ್ಲಾ ಕಾರಾಗೃಹದ ಅಧೀಕ್ಷಕರು ಬಿ.ಟಿ. ಹೋಬಳೇಶಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆಸ್ಪತ್ರೆ ವೆನ್ಲಾಕ್ ಐಸಿಟಿಸಿ ಕೌನ್ಸಿಲರ್,ಡಿಎಸ್ಆರ್ಸಿ ಕೌನ್ಸಿಲರ್ ಮತ್ತು ರಕ್ತ ಪರೀಕ್ಷಾ ಸಿಬ್ಬಂದಿ ಇವರ ವತಿಯಿಂದ ಕಾರಾಗೃಹದ ವಿಚಾರಣಾ ಬಂಧಿಗಳಿಗೆ ಹೆಪಟೈಟಿಸ್ ಬಿ ಮತ್ತು ಸಿ ಹಾಗೂ ಹೆಚ್ಐವಿ ಮತ್ತು ಸಿಪಿಲಿಸ್ (STI) ಬಗ್ಗೆ ಅರಿವು ಹಾಗೂ ಮಾಹಿತಿ ನೀಡಲಾಯಿತು.
Advertisement. Scroll to continue reading.