Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ/ಬೈಂದೂರು ಛಾಯಾಗ್ರಾಹಕ ಸಂಘದ ವತಿಯಿಂದ ರಾಜ್ಯಸಭೆ ನೂತನ ಸದಸ್ಯರಾಗಿ ಆಯ್ಕೆಯಾದ ವೀರೇಂದ್ರ ಹೆಗ್ಗಡೆಯವರಿಗೆ ಸನ್ಮಾನ

2

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ರಾಜ್ಯಸಭೆಯ ನೂತನ ಸದಸ್ಯರಾಗಿ ಆಯ್ಕೆಯಾದ ಧರ್ಮಸ್ಥಳದ ಧರ್ಮಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಇಂದು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಕುಂದಾಪುರ, ಬೈಂದೂರು ವಲಯದ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಛಾಯಾಗ್ರಾಹಕರನ್ನು ಉದ್ದೇಶಿಸಿ ಮಾತನಾಡಿದ ವೀರೇಂದ್ರ ಹೆಗ್ಗಡೆಯವರು, ಆಧುನಿಕ ತಂತ್ರಜ್ಞಾನದಿಂದ ಛಾಯಾಗ್ರಾಹಕರು ಸವಾಲಿಗೊಳಗಾಗಿದ್ದು, ಆ ಸವಾಲನ್ನು ಮೀರಿ ತಂತ್ರಜ್ಞಾನವನ್ನು ಮೈಗೂಡಿಸಿಕೊಳ್ಳುವ ಮೂಲಕ ಸಮಾಜಕ್ಕೆ ಉತ್ತಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಎಲ್ಲಾ ಛಾಯಾಗ್ರಾಹಕರಿಗೂ ಭಗವಂತನ ಅನುಗ್ರಹ ಸದಾಕಾಲವೂ ಇರಲಿ ಎಂದರು.

Advertisement. Scroll to continue reading.


ಈ ಸಂದರ್ಭ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಜಿಲ್ಲಾಧ್ಯಕ್ಷ ಆನಂದ ಬಂಟ್ವಾಳ್, ಕುಂದಾಪುರ-ಬೈಂದೂರು ವಲಯ ಅಧ್ಯಕ್ಷರಾದ ದೊಟ್ಟಯ್ಯ ಪೂಜಾರಿ, ಸಲಹಾ ಸಮಿತಿ ಅಧ್ಯಕ್ಷ ನಾಗರಾಜ್ ರಾಯಪ್ಪನಮಠ, ಪ್ರಧಾನ ಕಾರ್ಯದರ್ಶಿ ಸುರೇಶ್ ಜಮದಗ್ನಿ,ಅಮೃತ್ ಬೀಜಾಡಿ, ದಿನೇಶ್ ಮೊದಲಾದವರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!