Connect with us

Hi, what are you looking for?

ರಾಜ್ಯ

ಭಟ್ಕಳ : ಮನೆಯ ಮೇಲೆ ಕುಸಿದ ಗುಡ್ಡ; ಒಂದೇ ಕುಟುಂಬದ ನಾಲ್ವರ ದುರ್ಮರಣ

1

ಭಟ್ಕಳ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಟ್ಟಳ್ಳಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.

ಭಟ್ಕಳ ತಾಲೂಕಿನ ಮುಟ್ಟಳ್ಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ಧಾರಾಕಾರ ಮಳೆಗೆ ಮನೆಯ ಮೇಲೆ ಗುಡ್ಡ ಕುಸಿದು ನಾಲ್ವರು ಮೃತಪಟ್ಟಿದ್ದಾರೆ. ಲಕ್ಷ್ಮಿ ನಾರಾಯಣ ನಾಯ್ಕ, ಅನಂತ ನಾರಾಯಣ ನಾಯ್ಕ್, ಮಗಳು ಲಕ್ಷ್ಮಿ ,ಹಾಡುವಳ್ಳಿ ಬಡಬಾಗಿಲಿನ ತಂಗಿಮಗ ಪ್ರವೀಣ್ ರಾಮಕೃಷ್ಣ ನಾಯ್ಕ  ಎಂದು ಗುರುತಿಸಲಾಗಿದೆ.

ಬೆಳಗ್ಗೆ 4 ಘಂಟೆಯ ವೇಳೆ ಘಟನೆ ನಡೆದಿದ್ದು, ಧಾರಾಕಾರ ಮಳೆಯಾಗಿ ಹಲವೆಡೆ ನೆರೆ ಉದ್ಭವಿಸಿದ್ದರಿಂದ ರಕ್ಷಣಾ ಕಾರ್ಯ ತಡವಾಗಿದೆ. ಬೆಳಿಗ್ಗೆ 8 ಘಂಟೆಯ ಸುಮಾರಿಗೆ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ್ದು, ಮಧ್ಯಾಹ್ನ ಒಂದು ಘಂಟೆಯ ವೇಳೆ ನಾಲ್ಕು ಮೃತದೇಹಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ.

Advertisement. Scroll to continue reading.

ಅಗ್ನಿಶಾಮಕ ಸಿಬ್ಬಂದಿ, ಪೊಲಿಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಸದ್ಯ ದುರಂತ ನಡೆದ ಸ್ಥಳದಲ್ಲಿ ಜೆಸಿಬಿ ಮೂಲಕ ಮಣ್ಣು ತೆಗೆಯುವ ಕೆಲಸ ನಡೆಯುತ್ತಿದ್ದೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!