Connect with us

Hi, what are you looking for?

ರಾಷ್ಟ್ರೀಯ

ಹರ್ ಘರ್ ತಿರಂಗಾ : ಟ್ವಿಟ್ಟರ್, ಇನ್‌ಸ್ಟಾ ಡಿಪಿ ಬದಲಿಸಿದ ಪ್ರಧಾನಿ ಮೋದಿ

1

ನವದೆಹಲಿ : ದೇಶದಲ್ಲಿ ಇಂದಿನಿಂದ ಹರ್ ಘರ್ ತಿರಂಗಾ ಅಭಿಯಾನ ಆರಂಭಿಸಲಾಗಿದ್ದು, ಪ್ರತಿ ಮನೆಯ ಮೇಲೆ ಆಗಸ್ಟ್ 2 ರಿಂದ 15 ರವರೆಗೆ ತ್ರಿವರ್ಣ ಧ್ವಜ ಹಾರಿಸುವಂತೆ ಕೇಂದ್ರ ಸರ್ಕಾರ ಈಗಾಗಲೇ ಕೋರಿದೆ. ಅಲ್ಲದೇ, ಮನ್ ಕಿ ಬಾತ್‌ನಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣಗಳ ಡಿಪಿಯಲ್ಲಿ ತಿರಂಗಾ ಹಾಕುವಂತೆ ಹೇಳಿದ್ದರು. ಇದೀಗ ಸ್ವತಃ ಮೋದಿ ಅವರೇ ತಮ್ಮ ಟ್ವಿಟರ್, ಇನ್ಸ್ಟಾಗ್ರಾಮ್ ಖಾತೆಯ ಡಿಪಿ ಬದಲಿಸಿದ್ದಾರೆ.

ಪ್ರಧಾನಿ ಮೋದಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.‌ “ಇಂದು ವಿಶೇಷವಾದ ದಿನ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹೊಸ್ತಿಲಲ್ಲಿದ್ದೇವೆ. ಎಲ್ಲರೂ ಈ ಸಂಭ್ರಮ ಆಚರಿಸೋಣ. ತ್ರಿವರ್ಣ ಧ್ವಜವನ್ನು ಸಾಮೂಹಿಕವಾಗಿ ಹಾರಿಸುವ ಮೂಲಕ ಸಂಭ್ರಮ ಇಮ್ಮಡಿಗೊಳಿಸೋಣ. ಸಾಮಾಜಿಕ ಜಾಲತಾಣಗಳ ಡಿಪಿಯನ್ನು ನಾನು ಬದಲಿಸಿದ್ದೇನೆ. ನೀವು ಕೂಡ ಬದಲಿಸಿ ಎಂದು ಹೇಳಿದ್ದಾರೆ.

ಮತ್ತೊಂದು ಟ್ವೀಟ್‌ ಮಾಡಿರುವ ಪ್ರಧಾನಿ ಪಿಂಗಾಲಿ ವೆಂಕಯ್ಯ ಅವರ ಜನ್ಮದಿನವಾಗಿರುವ ಇಂದು ಅವರಿಗೆ ನಮನ ಸಲ್ಲಿಸಿದ್ದಾರೆ. “ಗೌರವಾನ್ವಿತ ಪಿಂಗಾಲಿ ವೆಂಕಯ್ಯ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸುತ್ತೇನೆ. ತ್ರಿವರ್ಣ ಧ್ವಜವನ್ನು ನೀಡಿದ ಅವರ ಸಾಧನೆಯನ್ನು ದೇಶ ಸ್ಮರಿಸುತ್ತದೆ. ಚಿರಋಣಿಯಾಗಿದೆ. ತ್ರಿವರ್ಣ ಧ್ವಜದಿಂದ ಶಕ್ತಿ ಮತ್ತು ಸ್ಫೂರ್ತಿ ಪಡೆದುಕೊಂಡು, ರಾಷ್ಟ್ರ ಪ್ರಗತಿಗಾಗಿ ಕೆಲಸ ಮಾಡುತ್ತಲೇ ಇರೋಣ” ಎಂದು ಅವರು ಹೇಳಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!