ವರದಿ : ದಿನೇಶ್ ರಾಯಪ್ಪನಮಠ
ಬೈಂದೂರು : ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆ ಉತ್ತರಕನ್ನಡ ಹಾಗೂ ದಕ್ಷಿಣ ಕನ್ನಡದ ಅಂಚಿನಲ್ಲಿರುವ ಶಿರೂರು ಬೈಂದೂರು ಕಳುಹಿತ್ಲು ಕಲ್ಮಕ್ಕಿಯ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ಯಾವುದೇ ಸಂಪರ್ಕವಿಲ್ಲದೆ ಜನ ಕಂಗೆಟ್ಟಿದ್ದಾರೆ. ಭಾರೀ ಮಳೆಯಿಂದ ರಾತ್ರಿ ಹಲವಾರು ಮನೆಗಳಿಗೆ ನೀರು ನುಗ್ಗಿದೆ. ರಾಜ್ಯ ಹೆದ್ದಾರಿ ಸಂಪೂರ್ಣ ಮುಳುಗಿದ್ದು, ಯಾವುದೇ ವಾಹನ ಸಂಚಾರ ಇಲ್ಲದೆ ಸ್ಥಗಿತವಾಗಿದೆ.
ಹಲವಾರು ಮನೆಗಳು ರಸ್ತೆ ಸಂಪರ್ಕವನ್ನೇ ಕಳೆದುಕೊಂಡಿದ್ದು, ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ.
ಕುಂದಾಪುರ ಮತ್ತು ಬೈಂದೂರು ತಾಲೂಕಿಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ನದಿಯ ತೀರದಲ್ಲಿರುವ ದೋಣಿಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಅಪಾರ ನಷ್ಟ ಉಂಟಾಗಿದೆ. ಸುಮಾರು 30ಕ್ಕೂ ಹೆಚ್ಚು ದೋಣಿಗಳಿಗೆ ಹಾನಿಯಾಗಿದೆ.
Advertisement. Scroll to continue reading.
ಹಾನಿಗೊಳಗಾದ ಪ್ರದೇಶಗಳಲ್ಲಿ ಬೈಂದೂರು ಆರಕ್ಷಕ ಠಾಣೆ ಸಿಬ್ಬಂದಿ ವರ್ಗದವರು, ಕಂದಾಯ ಇಲಾಖೆ, ಅಗ್ನಿ ಶಾಮಕ ದಳ ರಾತ್ರಿಯಿಂದಲೇ ಕಾರ್ಯಪ್ರವೃತ್ತರಾಗಿದ್ದಾರೆ.