Connect with us

Hi, what are you looking for?

ರಾಜ್ಯ

ಶಬರಿಮಲೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣ, ಮಂತ್ರಾಲಯದ ಛತ್ರ ಅಭಿವೃದ್ಧಿಗೆ ವಿಶೇಷ ಅನುದಾನ

1

ಬೆಂಗಳೂರು : ಹೊರ ರಾಜ್ಯದ ಯಾತ್ರಾಸ್ಥಳಗಳಿಗೆ ರಾಜ್ಯದಿಂದ ತೆರಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರ ನಿರ್ಮಾಣ ಮಾಡಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ.

ರಾಜ್ಯದ ಯಾತ್ರಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸೌಕರ್ಯಗಳನ್ನು ಅಭಿವೃದ್ದಿಪಡಿಸಲಾಗುವುದು ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ.

ಅವರು ಈ ಬಗ್ಗೆ ಮಾಧ್ಯಮ ಪ್ರಕಟಣೆಯನ್ನು ನೀಡಿದ್ದಾರೆ. ಸಿಎಂ ಬೊಮ್ಮಾಯಿ ನೇತೃತ್ವದ ಸರಕಾರ ರಾಜ್ಯದಲ್ಲಿನ ವಿವಿಧ ದೇವಸ್ಥಾನಗಳು, ಮಠಗಳು ಹಾಗೂ ಹೊರ ರಾಜ್ಯಗಳಲ್ಲಿರುವ ಕರ್ನಾಟಕ ಛತ್ರಗಳ ಅಭಿವೃದ್ದಿಗಾಗಿ ಕಳೆದ 10 ವರ್ಷಗಳಲ್ಲೇ ಅತಿ ಹೆಚ್ಚು ಅನುದಾನವನ್ನು ನೀಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹೊರ ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಾ ಸ್ಥಳಗಳಲ್ಲಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರಗಳ ನಿರ್ಮಾಣ ಹಾಗೂ ಅಭಿವೃದ್ದಿಗೂ ವಿಶೇಷ ಆದ್ಯತೆಯನ್ನು ನೀಡಿದ್ದಾರೆ.

Advertisement. Scroll to continue reading.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಬರಿಮಲೆ, ಮಂತ್ರಾಲಯ ಹಾಗೂ ಪಂಡರಾಪುರದ ಕರ್ನಾಟಕ ಛತ್ರಗಳ ನಿರ್ಮಾಣ ಮತ್ತು ಅಭಿವೃದ್ದಿಗೆ ವಿಶೇಷ ಅನುದಾನವನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆಗೆ ಸೂಚನೆ ನೀಡಿದ್ದರು. ಈ ಸಂಬಂಧ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಅತಿಹೆಚ್ಚು ಅನುದಾನ ನೀಡುವ ಮೂಲಕ ಇಲಾಖೆಯ ಅಭಿವೃದ್ದಿಗೆ ಹೆಚ್ಚಿನ ಸಹಕಾರ ನೀಡುತ್ತಿರುವುದಕ್ಕೆ ನಾನು ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ತಿರುಮಲದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 232 ಕೋಟಿ ರೂಪಾಯಿಗಳ ಬೃಹತ್‌ ಅನುದಾನವನ್ನು ಕಳೆದ ವರ್ಷ ನೀಡಲಾಗಿತ್ತು. ಇದರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಆಂಧ್ರಪದ್ರೆಶದ ಶ್ರೀಶೈಲದಲ್ಲಿರುವ ನೂತನ ಕರ್ನಾಟಕ ಛತ್ರದ ನಿರ್ಮಾಣಕ್ಕಾಗಿ 85 ಕೋಟಿ ರೂಪಾಯಿಗಳ ಅನುದಾನವನ್ನು ಮುಖ್ಯಮಂತ್ರಿ ಅವರು ಈಗಾಗಲೇ ಮಂಜೂರು ಮಾಡಿದ್ದು, ಸದ್ಯದಲ್ಲಿಯೇ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!