ಮಂಗಳೂರು: ಮಂಗಳೂರು ನಗರದಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಸಂಚರಿಸುವ ಹಿಂಬದಿ ಯುವ ಪುರುಷ ಸವಾರರಿಗೆ ನಿರ್ಬಂಧ ಹೇರಿ ಎಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಸರಣಿ ಹತ್ಯೆ ಸಂಬಂಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪರಿಶೀಲನಾ ಸಭೆಯ ಬಳಿಕ ಅವರು ಮಾತನಾಡಿದರು.
ಮಂಗಳೂರಿನಲ್ಲಿ ಇತ್ತೀಚಿಗೆ ನಡೆಯುತ್ತಿರುವ ಪರಿಸ್ಥಿತಿಯನ್ನು ಅವಲೋಕಿಸಿದ್ದು, ಈ ನಿಟ್ಟಿನಲ್ಲಿ ಬೈಕ್‌ನಲ್ಲಿ ಕೂರುವ ಹಿಂಬದಿ ಸವಾರರು ಹೆಚ್ಚು ಕ್ರೈಮ್‌ನಲ್ಲಿ ಭಾಗವಹಿಸಿರುವ ಹಿನ್ನಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಒಂದು ವಾರಗಳ ಕಾಲ ಪುರುಷರು ಬೈಕ್ ಹಿಂಬದಿಯಲ್ಲಿ ಕೂರುವಂತಿಲ್ಲ ಎಂದು ಹೇಳಿದ್ದಾರೆ.
ಇನ್ನೂ ಈ ನಿಯಮದಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು, ಹಿರಿಯರು ಹಾಗೂ ಸ್ತ್ರೀಯರಿಗೆ ವಿನಾಯಿತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಇದೇ ವೇಳೇ ಅವರು ಬೆಳ್ಳಾರೆಯಲ್ಲಿ ನಡೆದ ಕೊಲೆಗೆ ಸಂಬಂಧಪಟ್ಟಂತೆ ಮಾತಾಡಿದ ಅವರು, ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು. ಈಗಾಗಲೇ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಇನ್ನೂ ಕೇರಳ ಗಡಿಯಲ್ಲಿ ನಿಗಾ ಇಡುವ ಬಗ್ಗೆ ಮುಖ್ಯಮಂತ್ರಿ, ಗೃಹ ಸಚಿವ, ಡಿಜಿ ಅವರು ಸಲಹೆ ನೀಡಿದ್ದಾರೆ. ಅದರಂತೆ ಜಿಲ್ಲೆಯ 18 ಕಡೆಗಳಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಅಲ್ಲಿ ಸಿಸಿಟಿವಿ ಅಳವಡಿಸಿ, ಕೆ ಎಸ್ ಆರ್ ಪಿ ಸಿಬ್ಬಂದಿ ನಿಯೋಜಿಸಿ ನಿಗಾ ಇಡಲಾಗುವುದು. ಇದು ಇನ್ನೂ ಒಂದು ವರ್ಷ ಇರಲಿದೆ ಎಂದರು.