ದಕ್ಷಿಣ ಕನ್ನಡ: ರಾತ್ರಿಯ ವೇಳೆ ಅಪರಾಧ ಚಟುವಟಿಕೆ ತಡೆಗಟ್ಟುವ ನಿಟ್ಟಿನಲ್ಲಿ ದ್ವಿಚಕ್ರ ವಾಹನ ಹಿಂಬದಿಯ ಸವಾರರಿಗೆ ಪ್ರಯಾಣ ನಿರ್ಬಂಧ ವಿಧಿಸಿ ಪೊಲೀಸ್ ಇಲಾಖೆ ಆದೇಶಿಸಿತ್ತು. ಇದಕ್ಕೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಈ ಆದೇಶವನ್ನು ವಾಪಾಸ್ ಪಡೆಯಲಾಗಿದೆ.
ಈ ಸಂಬಂಧ ಜಿಲ್ಲಾ ಪೊಲೀಸ್ ಇಲಾಖೆಯಿಂದ ಆದೇಶ ಹೊರಡಿಸಲಾಗಿತ್ತು. ಸಂಜೆ 6 ರಿಂದ ಬೆಳಿಗ್ಗೆ 6ರ ವರೆಗೆ ರಾತ್ರಿಯ ವೇಳೆಯಲ್ಲಿ ಬೈಕ್ ನಲ್ಲಿ ಹಿಂಬದಿಯ ಸವಾರರು ಸಂಚರಿಸಲಿ ನಿರ್ಬಂಧ ವಿಧಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿತ್ತು. ಸಾರ್ವಜನಿಕರ ಒತ್ತಡಕ್ಕೆ ಮಣಿದು ಇದೀಗ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಪಾಸ್ ಪಡೆಯಲಾಗಿದೆ ಎಂದು ತಿಳಿಸಿದೆ.
Advertisement. Scroll to continue reading.
In this article:dakshina kannada, Diksoochi news, diksoochi Tv, diksoochi udupi, mangalore
Click to comment