ಉಡುಪಿ : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ವತಿಯಿಂದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ನೀಡುವ ಕರ್ನಾಟಕ ರಾಜ್ಯ ಯುವ ಪ್ರಶಸ್ತಿಗೆ ರಂಗಭೂಮಿ ಕ್ಷೇತ್ರಕ್ಕೆ ಸಂಬಂಧಿಸಿ ಉಡುಪಿ ಜಿಲ್ಲೆಯಿಂದ ರಾಮಾಂಜಿ ಆಯ್ಕೆಗೊಂಡಿದ್ದಾರೆ.
ಚಿಕ್ಕಮಗಳೂರಿನ ತರೀಕೆರೆಯ ಡಾ.ಬಿ.ಆರ್.ಅಂಬೇಡ್ಕರ್ ಬಯಲು ರಂಗ ಮಂದಿರದಲ್ಲಿ ಆ.7 ರಂದು ನಡೆಯುವ ಸಮಾರಂಭದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ರಾಮಾಂಜಿ ಕುಂದಾಪುರದ ಅಂತಾರಾಷ್ಟ್ರೀಯ ದುಡಿಯುವ ಮಕ್ಕಳ ಸಂಸ್ಥೆಯಾದ ‘ನಮ್ಮ ಭೂಮಿ’ಯ ಪ್ರತಿನಿಧಿಯಾಗಿದ್ದಾರೆ. ಉಡುಪಿಯ ಎಂಜಿಎಂ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಅವರು, ಪ್ರಸಕ್ತ ಮಂಗಳೂರು ವಿವಿಯ ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಅಂತಿಮ ವರ್ಷದ ಕನ್ನಡ ಎಂ.ಎ. ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಯಾಗಿದ್ದಾರೆ.
Advertisement. Scroll to continue reading.