ಶಿವಮೊಗ್ಗ : ಖೋ ಖೋ ಆಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ತೀರ್ಥಹಳ್ಳಿಯ ಕ್ರೀಡಾ ಸಾಧಕ ವಿನಯ್ ತಡರಾತ್ರಿ ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ 33 ವರ್ಷ ವಯಸ್ಸಾಗಿತ್ತು.
ಮೆದುಳು ಜ್ವರದಿಂದ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಕೆಲದಿನಗಳಿಂದ ಅವರು ಮೆದುಳು ಜ್ವರದಿಂದ ಬಳಲುತ್ತಿದ್ದರು. ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಮೃತಪಟ್ಟಿದ್ದಾರೆ.
Advertisement. Scroll to continue reading.
ವಿನಯ್, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟವನ್ನು ಖೋ ಖೋ ಕ್ರೀಡೆಯಲ್ಲಿ ಪ್ರತಿನಿಧಿಸಿದ್ದರು. ಬೆಂಗಳೂರಿನಲ್ಲಿ ಕೆಲಸದಲ್ಲಿದ್ದ ವಿನಯ್ ಕರೋನಾ ಬಳಿಕ ತೀರ್ಥಹಳ್ಳಿಗೆ ವಾಪಸ್ ಆಗಿದ್ದರು. ತೀರ್ಥಹಳ್ಳಿಯ ಏಕಲವ್ಯ ಸ್ಪೋರ್ಟ್ಸ್ ಕ್ಲಬ್ ಹಾಗೂ ಕರ್ನಾಟಕ ಪ್ರತಿನಿಧಿಸಿ ಎರಡು ಬಾರಿ ರನ್ನರ್ ಅಪ್ ಆಗಿದ್ದರು. ಅವರ ಸಾಧನೆಗೆ ಕರ್ನಾಟಕ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಿತ್ತು.
In this article:Diksoochi news, Diksoochi t v, diksoochi udupi, Karnataka rathna, kho kho player, Theerthahalli, Vinay
Click to comment