ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಮೂವರು ಪ್ರಮುಖ ಆರೋಪಿಗಳನ್ನು ಕೇರಳದಲ್ಲಿ ವಶಪಡಿಸಿಕೊಂಡಿದ್ದಾರೆ.
ಶಿಯಾಬ್, ರಿಯಾಜ್, ಬಶೀರ್ ಬಂಧಿತ ಆರೋಪಿಗಳಾಗಿದ್ದು, ಸದ್ಯ ಮೂವರು ಆರೋಪಿಗಳನ್ನು ಗೌಪ್ಯಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
ಪ್ರವೀಣ್ ಹತ್ಯೆ ಮಾಡಿದ್ದ ಆರೋಪಿಗಳು ಬಳಿಕ ಕೇರಳಕ್ಕೆ ಪರಾರಿಯಾಗಿದ್ದಾರು. ಪ್ರಕರಣದ ತನಿಖೆ ಆರಂಭಿಸಿದ್ದ ಪೊಲೀಸರು ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
Advertisement. Scroll to continue reading.
ಇಂದು ಮಧ್ಯಾಹ್ನ 12 ಗಂಟೆಗೆ ಎಡಿಜಿಪಿ ಅಲೋಕ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.