ನವದೆಹಲಿ : ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ದೆಹಲಿ ಸರ್ಕಾರ ಎಚ್ಚೆತ್ತುಕೊಂಡಿದ್ದು, ಮತ್ತೆ ಮಾಸ್ಕ್ ಕಡ್ಡಾಯದ ಮೊರೆ ಹೋಗಿದೆ. ದೆಹಲಿಯಲ್ಲಿ ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸುವ ನಿಯಮ ಜಾರಿಗೆ ಬಂದಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗಿದ್ದು, ಪಾಸಿಟಿವಿಟಿ ರೇಟ್ 17.ಮಾಸ್ಕ್ ಧರಿಸದವರಿಗೆ 500 ರೂ. ದಂಡ ವಿಧಿಸುವ ಆದೇಶ ಜಾರಿ ಮಾಡಲಾಗಿದೆ.
ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯ ಮಾಡಲಾಗಿದೆ. ಒಂದು ವೇಳೆ ಧರಿಸದೇ ಇದ್ದರೆ, ಅದು ಅಪರಾಧವಾಗಲಿದೆ. ಇದಕ್ಕಾಗಿ 500 ರೂ. ದಂಡ ವಿಧಿಸಲಾಗುತ್ತದೆ ಆದೇಶದಲ್ಲಿ ತಿಳಿಸಿದೆ.
Advertisement. Scroll to continue reading.