ನವದೆಹಲಿ : ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ನೂತನ ಉಪ ರಾಷ್ಟ್ರಪತಿಗೆ ಪ್ರಮಾಣನ ವಚನ ಬೋಧಿಸಿದರು.
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಈ ಕಾರ್ಯಕ್ರಮ ನಡೆದಿದೆ.
ಈ ಸಮಾರಂಭದಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ,ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.
Advertisement. Scroll to continue reading.