Connect with us

Hi, what are you looking for?

Diksoochi News

ಕರಾವಳಿ

ಬಿಲ್ಲಾಡಿ ಗ್ರಾಪಂನಿಂದ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ

0

ಬ್ರಹ್ಮಾವರ : 10 ನೇ ಬಿಲ್ಲಾಡಿ ಗ್ರಾಮಪಂಚಾಯತ್ ನೇತೃತ್ವದಲ್ಲಿ ಬಿಲ್ಲಾಡಿ ಗ್ರಾಮ ಪಂಚಾಯತ್ ನ ಪ್ರತೀ ಮನೆಗೆ ಪಂಚಾಯತ್‌ನಿಂದ ರಾಷ್ಟ್ರ ಧ್ವಜ ನೀಡುವುದರ ಮೂಲಕ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ಕಾರ್ಯಕ್ರಮ ನೀಡಲಾಯಿತು. ಈ ಸಂದರ್ಭ ಮಾತನಾಡಿದ ಮಾಜಿ ಗ್ರಾಮಪಂಚಾಯತ್ ಅಧ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ, ದೇಶಕ್ಕೆ ಅದೆಷ್ಟೋ ಮಹಾತ್ಮರ ತ್ಯಾಗ ಬಲಿದಾನದಿಂದ ಸ್ವಾತಂತ್ರ್ಯ ದೊರಕಿ 75 ವರ್ಷ ತುಂಬಿ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಬಿಲ್ಲಾಡಿ ಗ್ರಾಮದ ಪ್ರತೀ ಮನೆಯಲ್ಲೂ ಆಗಸ್ಟ್ 13 ರಿಂದ ಆಗಸ್ಟ್ 15 ರ ತನಕ ರಾಷ್ಟ್ರ ದ್ವಜ ಹಾರಿಸುವುದರ ಮೂಲಕ ಗ್ರಾಮದಲ್ಲಿ ಉತ್ಸವವಾಗಿ ಆಚರಿಸೋಣ ಎಂದರು.
ಬಿಲ್ಲಾಡಿ ಗ್ರಾಮಪಂಚಾಯತ್ ಉಪಾದ್ಯಕ್ಷ ಪ್ರಕಾಶ್ ಶೆಟ್ಟಿ ನೈಲಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಗ್ರಾಮಪಂಚಾಯತ್ ಸದಸ್ಯ ರವಿ ಆಚಾರ್ ಅರಾಡಿ, ಶಕುಂತಲಾ ಹಾಲು ಉತ್ಪಾದಕರ ಸಹಕಾರಿ ಸಂಘದ ಅದ್ಯಕ್ಷರಾದ ಮಮತಾ ಎಸ್ ಶೆಟ್ಟಿ, ಕೆ.ಎಂ.ಎಫ್ ವಿಸ್ತರಣಾ ಅಧಿಕಾರಿ ಪ್ರತಿಭಾ, ಕಾರ್ಯದರ್ಶಿ ಮೋಹಿನಿ, ಎಲ್ಲಾ ನಿರ್ದೇಶಕರು ,ಸದಸ್ಯರು ಅಂಗನವಾಡಿ ಕಾರ್ಯಕರ್ತೆಯರು, ಊರಿನ ಯುವಕರು ಉಪಸ್ಥಿತರಿದ್ದರು.
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ಅರೆ ಹೌದಾ!

0 ದಿನಾ ಕುಡಿದು ಬಂದು ಪಾಠ ಮಾಡದೇ ಕೊಠಡಿಯಲ್ಲಿ ಮಲಗುತ್ತಿರುವ ಶಿಕ್ಷಕನ ಕಾರ್ಯಕ್ಕೆ ರೊಚ್ಚಿಗೆದ್ದ ಅದೇ ಶಾಲೆಯ ವಿದ್ಯಾರ್ಥಿಗಳು ಕುಡುಕ ಶಿಕ್ಷಕನಿಗೆ ಸರಿಯಾದ ಪಾಠ ಕಳಿಸಿದ್ದಾರೆ. ಛತ್ತೀಸ್‌ಗಢದ ಬಸ್ತಾರ್‌ನಲ್ಲಿರುವ ಶಾಲೆಯ ಶಿಕ್ಷರೊಬ್ಬರು ದಿನಾ...

ರಾಜ್ಯ

0 ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಇಂತಹವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆಂದು ಕಾಂಗ್ರೆಸ್‌ ಮುಖಂಡ ಯತೀಂದ್ರ...

error: Content is protected !!