Connect with us

Hi, what are you looking for?

ಕರಾವಳಿ

ಎಬಿವಿಪಿ ಮಂಗಳೂರು ಮಹಾನಗರದ ವತಿಯಿಂದ ಬೃಹತ್ ತಿರಂಗ ಯಾತ್ರೆ

1

ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯಕ್ತ ಎಬಿವಿಪಿ ಮಂಗಳೂರು ಮಹಾನಗರದ ವತಿಯಿಂದ ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಸ್ವತಂತ್ರ ಧ್ವಜವನ್ನು ಹಾರಿಸಿ ಹೋರಾಟ ಮಾಡಿದ ಬಾವುಟಗುಡ್ಡದವರೆಗೆ ಬೃಹತ್ ತಿರಂಗ ಯಾತ್ರೆಯನ್ನು ಮಾಡಲಾಯಿತು.

ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಮಣೆಕಂಠ ಕಳಸಾ ಮಾತನಾಡಿ, ಸ್ವತಂತ್ರ ಭಾರತದ ಹೋರಾಟಕ್ಕಾಗಿ ಮೊದಲ ಸ್ವಾತಂತ್ರ ಧ್ವಜವನ್ನು ಹಾರಿಸಿ, ಸ್ವತಂತ್ರವನ್ನ ಘೋಷಿಸಿಕೊಂಡ ಸ್ಥಳ ಬಾವುಟಗುಡ್ಡ ಆ ಸ್ಥಳವನ್ನು ನಾವೆಲ್ಲರೂ ಸ್ಮರಿಸಿಕೊಳ್ಳಬೇಕು ಎಂದರು.

ಮಂಗಳೂರು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಚಿನ ಕುಳಗೇರಿ ಮಾತನಾಡಿ, ವಿದ್ಯಾರ್ಥಿ ಸಮುದಾಯ ತಮ್ಮ ಶಿಕ್ಷಣದ ಜೊತೆಗೆ ಸ್ವತಂತ್ರ ಹೋರಾಟಕ್ಕಾಗಿ ಹೋರಾಡಿದ ವ್ಯಕ್ತಿಗಳ ಚರಿತ್ರೆಗಳನ್ನು ಅಧ್ಯಯನ ಮಾಡುವ ಪ್ರವೃತ್ತಿಯನ್ನು ಹೊಂದಬೇಕು. ತಮ್ಮ ಶಿಕ್ಷಣದ ನಂತರ ಹೋಗುವ ಎಲ್ಲ ಕ್ಷೇತ್ರಗಳಲ್ಲಿ ನಾನು ಮಾಡುವ ಕೆಲಸ ದೇಶಕ್ಕೆ ಒಳಿತನ್ನ ಮಾಡುವ ಹಾಗೆ ನಮ್ಮ ಕಾರ್ಯ ಇರಬೇಕು ಎಂದರು.

ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಬಾವುಟ ಗುಡ್ಡದವರೆಗೆ ನೂರಾರು ವಿದ್ಯಾರ್ಥಿಗಳು ತಿರಂಗವನ್ನು ಹಿಡಿದು, ಭಾರತ್ ಮಾತಾ ಕಿ ಜೈ ವಂದೇ ಮಾತರಂ ಘೋಷಣೆಗಳನ್ನು ಕೂಗುತ್ತಾ ತಿರಂಗ ಯಾತ್ರೆಯಲ್ಲಿ ಭಾಗವಹಿಸಿದ್ದರು.


ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಶ್ರೇಯಸ್ ಶೆಟ್ಟಿ, ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯ ಶ್ರೀಲಕ್ಷ್ಮಿ ಮಠದಮೂಲೆ, ನಗರ ಕಾರ್ಯದರ್ಶಿ ಆದಿತ್ಯ ಶೆಟ್ಟಿ, ಪ್ರಮುಖರಾದ ಸ್ಕಂದ ಕಿರಣ, ಶ್ರೀಪಾದ ತಂತ್ರಿ, ಸುಶಾಂತ, ಮೇಘನಾ, ಪ್ರತಿಕ್ಷಾ, ಹರ್ಷಿತಾ, ಸಂತೋಷ ರೈ, ರಂಜಿತ,ರಾಹುಲ ಇತರರು ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!