ಬಾಗಲಕೋಟೆ : 9 ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಮಖಂಡಿಯಲ್ಲಿ ನಡೆದಿದೆ. ರಾಹುಲ್ ವಿಠಲ್ (15) ಮೃತ ಬಾಲಕ.
ಅರ್ಧ ವಾರ್ಷಿಕ ಪರೀಕ್ಷೆ ಬರೆಯುತ್ತಿದ್ದ ವೇಳೆ ರಾಹುಲ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಈ ವೇಳೆ ಆಸ್ಪತ್ರೆಗೆ ಕರೆದೊಯುವ ವೇಳೆ ಮಾರ್ಗ ಮಧ್ಯದಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ರಾಹುಲ್ ಹುಲ್ಯಾಳ ಗ್ರಾಮದ ಖಾಸಗಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ. ರಾಹುಲ್ ಇಷ್ಟಪಟ್ಟಿರುವ ಸುದ್ದಿಯನ್ನು ಶಿಕ್ಷಕರು ಪಾಲಕರಿಗೆ ತಿಳಿಸಿದ್ದಾರೆ. ಈ ವೇಳೆ ಶಾಲೆಯಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಂಬನಿ ಮಿಡಿದಿದ್ದಾರೆ. ಅಲ್ಲದೆ, ರಾಹುಲ್ ಗೆ ಹೃದಯ ಸಂಬಂಧಿ ಕಾಯಿಲೆ ಇತ್ತು ಎಂದು ಹೇಳಲಾಗಿದೆ.
Advertisement. Scroll to continue reading.