ಶಿವಮೊಗ್ಗ : ನಗರದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆ ವೇಳೆ ದುಷ್ಕರ್ಮಿಗಳಿಂದ ಕಲ್ಲೆಸೆತ ನಡೆದಿದೆ. ಪರಿಣಾಮ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ರಾಗಿಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆದೇಶಿಸಿದ್ದಾರೆ.
ಶಾಂತಿನಗರದಲ್ಲಿ ಲಘು ಲಾಠಿಚಾರ್ಜ್ ಮಾಡಿದ ವೇಳೆ ಕಿಡಿಗೇಡಿಗಳಿಂದ ಪೊಲೀಸರ ಮೇಲೆ ಕಲ್ಲು ತೂರಾಟ ಕೂಡ ನಡೆದಿದೆ ಎನ್ನಲಾಗಿದೆ.
ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಪ್ರಯುಕ್ತ ಸಾವಿರಾರು ಮುಸ್ಲಿಮರು ಮೆರವಣಿಗೆ ಮಾಡುತ್ತಿದ್ದರು. ಈ ಸಂದರ್ಭ ಕಿಡಿಗೇಡಿಗಳಿಂದ ಕಲ್ಲು ತೂರಾಟ ನಡೆದಿದೆ.

ಕಲ್ಲು ತೂರಾಟದ ಘಟನೆ ನಡೆದ ತಕ್ಷಣವೇ ರಾಪಿಡ್ ಆಕ್ಷನ್ ಫೋರ್ಸ್ ನಿಂದ ಕಾರ್ಯಚರಣೆ ಮಾಡಲಾಗಿದೆ. ಪೊಲೀಸರಿಂದ ಗುಂಪು ಚದುರಿಸಲು ಲಘು ಲಾಟಿ ಪ್ರಹಾರ ಮಾಡಲಾಗಿದೆ. ಕಲ್ಲು ತೂರಾಟ ನಡೆಸಿದ್ದ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಸದ್ಯ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದು 144 ಸೆಕ್ಷನ್ ಜಾರಿ ಮಾಡಲಾಗಿದೆ.
