Connect with us

Hi, what are you looking for?

ಕರಾವಳಿ

ಉಪ್ಪೂರು ಗ್ರಾಮದ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ : ನ್ಯಾ. ಶಾಂತವೀರ ಶಿವಪ್ಪ

2

ಉಡುಪಿ : ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ವಿವಿಧ ಸಮಸ್ಯೆಗಳ ಬಗ್ಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾಡಳಿತದ ಮೂಲಕ ಪರಿಹಾರ ಒದಗಿಸುವ ಮತ್ತು ಕಾನೂನು ಅರಿವು ಮತ್ತು ನೆರವು ನೀಡುವ ಕಾರ್ಯಕ್ರಮವನ್ನು ಸೆಪ್ಟಂಬರ್ ೧೦ ರಂದು ಬೆಳಗ್ಗೆ ೧೦.೩೦ಕ್ಕೆ ಉಪ್ಪೂರು ಜಾತಬೆಟ್ಟುವಿನ ಚಿತ್ತಾರಿ ಮಹಾಬಲೇಶ್ವರ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದರು.


ಅವರು ಇಂದು ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.


ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳ ಮೂಲಕ ೧೨೦೦ ಮನೆಗಳ ಸಮೀಕ್ಷೆ ನಡೆಸಿ, ಗ್ರಾಮಸ್ಥರ ವಿವಿಧ ಸಮಸ್ಯೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು, ಈ ಸಮಸ್ಯೆಗಳಲ್ಲಿ ಸ್ಥಳದಲ್ಲೇ ಬಗೆಹರಿಸಬಹುದಾದ ಸಮಸ್ಯೆಗಳನ್ನು ಸೆಪ್ಟಂಬರ್ ೧೦ ರಂದು ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಮೂಲಕ ಪರಿಹಾರ ಒದಗಿಸಲಾಗುವುದು ಮತ್ತು ಉಳಿದ ಸಮಸ್ಯೆಗಳ ವಿವರಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿ ಕಾಲಮಿತಿಯಲ್ಲಿ ಅವುಗಳಿಗೆ ಪರಿಹಾರ ಒದಗಿಸುವಂತೆ ತಿಳಿಸಲಾಗುವುದು ಹಾಗೂ ಈ ಬಗ್ಗೆ ಆದ ಪ್ರಗತಿಯ ಕುರಿತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ನಿಯಮಿತವಾಗಿ ಪರಿಶೀಲಿಸಲಾಗುವುದು ಎಂದರು.

Advertisement. Scroll to continue reading.


ಕಾರ್ಯಕ್ರಮ ನಡೆಯುವ ದಿನದಂದು ವಿವಿಧ ಇಲಾಖೆಗಳ ವತಿಯಿಂದ ವಸ್ತು ಪ್ರದರ್ಶನ ಮಳಿಗೆಗಳನ್ನು ತೆರೆದು ಇಲಾಖೆಗಳಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು. ವಿವಿಧ ಯೋಜನೆಗಳ ನೆರವು ಪಡೆಯಲು ಅಗತ್ಯವಿರುವ ಅರ್ಜಿಗಳನ್ನು ನೀಡುವುದರ ಜೊತೆಗೆ ಸೂಕ್ತ ದಾಖಲಾತಿಗಳಿದ್ದಲ್ಲಿ ಸ್ಥಳದಲ್ಲಿಯೇ ಸೌಲಭ್ಯಗಳಿಗೆ ಮಂಜೂರಾತಿಯನ್ನು ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರು ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ನ್ಯಾ.ವೀರಪ್ಪ ಭಾಗವಹಿಸಲಿದ್ದಾರೆ ಎಂದರು.


ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಿಂಚಣಿ ಮಂಜೂರಾತಿ, ವಿಕಲಚೇತನ ಸೌಲಭ್ಯ, ಕಂದಾಯ ಸಮಸ್ಯೆಗಳು ಮತ್ತು ರಸ್ತೆ ಸಮಸ್ಯೆಯ ಬಗ್ಗೆ ಸಮೀಕ್ಷೆಯಲ್ಲಿ ತಿಳಿಸಿದ್ದಾರೆ ಎಂದರು.
ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆ ಪ್ರೊ.ನಿರ್ಮಲಾ ಕುಮಾರಿ ಮಾತನಾಡಿ, ತಮ್ಮ ಕಾಲೇಜಿನ 172 ವಿದ್ಯಾರ್ಥಿಗಳು 17 ಗುಂಪುಗಳಾಗಿ ವಿಂಗಡಣೆಗೊ0ಡು 2  ದಿನದಲ್ಲಿ  ಉಪ್ಪುರು ಗ್ರಾಮ  ವ್ಯಾಪ್ತಿಯಲ್ಲಿ 1200 ಮನೆಗಳ ಈ ಸಮೀಕ್ಷೆಯನ್ನು ಮಾಡಿದ್ದಾರೆ ಎಂದರು.


ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ವಕೀಲರ ಸಂಘಧ ಅಧ್ಯಕ್ಷ ನಾಗರಾಜ್, ಪ್ರಧಾನ ಕಾರ್ಯದರ್ಶಿ ರೊನಾಲ್ಡ್ ಪ್ರವೀಣ್ ಕುಮಾರ್, ವಕೀಲ ನಾಗರಂಜನ್ ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!