ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಮಿನಿ ವಿಧಾನಸೌಧದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ತಾಲೂಕು ಆಡಳಿತ, ತಾ.ಪಂ. ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಅವರ 168ನೇ ಜಯಂತಿ ಕಾರ್ಯಕ್ರಮ ನಡೆಯಿತು.
ಕುಂದಾಪುರ ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ ಅವರು ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮೂಲಕ ಕಾರ್‍ಯಕ್ರಮವನ್ನು ಉದ್ಘಾಟಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೆಕರ್ ಮಾತನಾಡಿ,ಕುಂದಾಪುರ ಡಿವೈಎಸ್‌ಪಿ ಶ್ರೀಕಾಂತ್ ಕೆ., ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಎನ್., ಉಪತಹಶೀಲ್ದಾರ್ ಚಂದ್ರಶೇಖರ್, ವಿವಿಧ ಇಲಾಖಾ ಅಧಿಕಾರಿಗಳು, ಸಿಬಂದಿ ವರ್ಗ, ಬಿಲ್ಲವ ಸಮಾಜ ಸೇವಾ ಸಂಘದ ಕಾರ್‍ಯದರ್ಶಿ ಗಣೇಶ್ ವಿಠಲವಾಡಿ, ಉಪಾಧ್ಯಕ್ಷ ಭಾಸ್ಕರ ಬಿಲ್ಲವ, ಮಹಿಳಾ ಘಟಕಾಧ್ಯಕ್ಷೆ ಸುಮನಾ ಬಿದ್ಕಲ್‌ಕಟ್ಟೆ, ಹೇಮಾವತಿ, ಜಾನಕಿ ಬಿಲ್ಲವ, ಶೈಕ್ಷಣಿಕ ಹಾಗೂ ದತ್ತಿ ಸಂಸ್ಥೆಯ ಕಾರ್‍ಯದರ್ಶಿ ಭಾಸ್ಕರ ವಿಠಲವಾಡಿ, ನಾರಾಯಣ ಗುರು ಯುವಕ ಮಂಡಲದ ಅಧ್ಯಕ್ಷ ಅಜಿತ್, ಪ್ರಮುಖರಾದ ದಿವಾಕರ ಕಡ್ಗಿಮನೆ, ರಾಜೇಶ್ ಕಡ್ಗಿಮನೆ, ಆನಂದ ಕೊಡೇರಿ, ಯೋಗೀಶ್ ಕೋಡಿ, ಮತ್ತಿತರರು ಉಪಸ್ಥಿತರಿದ್ದರು.
ಉಪತಹಶೀಲ್ದಾರ್ ವಿನಯ್ ಸ್ವಾಗತಿಸಿ, ಕಾರ್‍ಯಕ್ರಮ ನಿರೂಪಿಸಿದರು.
