Connect with us

Hi, what are you looking for?

ಕರಾವಳಿ

ಪೆರಂಪಳ್ಳಿ : ಶೀಂಬ್ರ ಶ್ರೀಸಿದ್ಧಿ ವಿನಾಯಕ ದೇವಸ್ಥಾನ ಕೃಷ್ಣಾಂಗಾಕರ ಸ್ಥಾನ ಘಟ್ಟ ಪ್ರದೇಶದಲ್ಲಿ ಭೂಕುಸಿತ

2

ಉಡುಪಿ : ಪೆರಂಪಳ್ಳಿ ಶೀಂಬ್ರ ಶ್ರೀಸಿದ್ಧಿ ವಿನಾಯಕ ದೇವಸ್ಥಾನದ ಬಳಿ ಈಗಾಗಲೇ ಸಣ್ಣ ನೀರಾವರಿ ಇಲಾಖೆಯಿಂದ ಸುಮಾರು ಒಂದು ಕೋಟಿ ವೆಚ್ಚದಲ್ಲಿ ಸ್ಥಾನಘಟ್ಟದ ಕೆಲಸ ಆರಂಭವಾಗಿದೆ. ನಂತರ ದಿನಗಳಲ್ಲಿ ಸ್ಥಾನ ಘಟ್ಟದ ಕೆಲಸ ಬರದಿಂದ ಸಾಗದೆ ನಿಧಾನಗತಿಯಲ್ಲಿ ಕಾರ್ಯರಂಭವಾಗಿದೆ. ಮಳೆಗಾಲ ಆರಂಭವಾದರಿಂದ ಈ ಪ್ರದೇಶದಲ್ಲಿ ನೀರಿನ ಸೆಳೆತ ಮತ್ತು ಈ ಬಾರಿ ಸೆಪ್ಟೆಂಬರ್ ತಿಂಗಳಲ್ಲಿ ಅತಿ ಹೆಚ್ಚು ಮಳೆ ಬಿದ್ದದರಿಂದ ದೇವಸ್ಥಾನದ ಬದಿಯಲ್ಲಿಯೇ ಈ ಸ್ಥಾನಘಟ್ಟಕ್ಕೆ ಕಾಮಗಾರಿ ಆರಂಭವಾದರಿಂದ ದೇವಸ್ಥಾನದ ಹೆಚ್ಚಿನ ಭಾಗ ಕುಸಿತ ಕಂಡಿದೆ. ಆದುದರಿಂದ ಭಕ್ತರಲ್ಲಿ ಆತಂಕ ಮೂಡಿದೆ.

ದೇವಸ್ಥಾನದ ಹತ್ತಿರದಲ್ಲೇ ಕುಸಿತವಾದ್ದರಿಂದ ಪ್ಲಾಸ್ಟಿಕ್ ಹೊದಿಕೆಯಿಂದ ರಕ್ಷಣೆ ಮಾಡಿದ್ದಾರೆ. ಮುಂದಿನ ದಿನ ದೇವಸ್ಥಾನಕ್ಕೆ ಅಪಾಯವಿದೆ. ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ. ಗುಣಮಟ್ಟದ ಕಾಮಗಾರಿ ಹಾಗೂ ಇನ್ನೂ ಹೆಚ್ಚುವರಿವಾಗಿ ನದಿ ತೀರವನ್ನು ಸದೃಢವಾಗಿ ಕಟ್ಟಲು ಹೆಚ್ಚುವರಿ ಅನುದಾನ ಬಿಡುಗಡೆಮಾಡಿ. ಈ ಸುಂದರನದಿಯಾದ ಸುವರ್ಣ ನದಿಯ ವಿಹಂಗಮ ತೀರವನ್ನು ರಕ್ಷಿಸಿಕೊಳ್ಳಬೇಕಾಗಿದೆ‌ ಹಾಗೂ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆಯನ್ನು ಕೂಡ ಇಲ್ಲಿ ಕಲ್ಪಿಸಬೇಕಾಗಿದೆ. ಈ ದೃಷ್ಟಿಯಲ್ಲಿ ಸೂಕ್ತ ರಸ್ತೆಯ ವ್ಯವಸ್ಥೆ, ದಾರಿದೀಪದ ವ್ಯವಸ್ಥೆ ಹಾಗೂ ಅಂಗಾರಕ ಚತುರ್ಥಿಯ ದಿನದಂದು ರಾಜ್ಯದ ಮೂಲೆ ಮೂಲೆಗಳಿಂದ ಭಕ್ತಾದಿಗಳು ಇಲ್ಲಿಯ ಸ್ಥಾನ ಘಟ್ಟದಲ್ಲಿ ಮಿಂದು ಪಾವನಗೊಳ್ಳುತ್ತಾರೆ. ಇಲ್ಲಿ ಮೂಲಭೂತ ಸೌಲತ್ತುಗಳನ್ನು ಕೂಡ ಜಿಲ್ಲಾಡಳಿತ ಒದಗಿಸಬೇಕು ಶ್ರೀಸಿದ್ದಿ ವಿನಾಯಕ ದೇವಸ್ಥಾನದ ಪ್ರದೇಶವನ್ನು ರಕ್ಷಣೆ ಮಾಡುವಲ್ಲಿ ಹೆಚ್ಚುವರಿ ಹಣ ಬಿಡುಗಡೆ ಮಾಡಬೇಕೆಂದು ಸ್ಥಳೀಯರಾದ ಜಯಶೆಟ್ಟಿ ಬನ್ನಂಜೆ, ಗಣೇಶ್ ರಾಜ್ ಸರಳೇಬೆಟ್ಟು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!