ಶಿವಮೊಗ್ಗ : ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ, ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈವರೆಗೆ 24 ಎಫ್‌ಐಆರ್ ದಾಖಲಿಸಲಾಗಿದೆ. ಅಲ್ಲದೇ, 60 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಕುರಿತಂತೆ ಸೋಮವಾರ ಮಾಹಿತಿ ನೀಡಿದ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 60 ಜನರನ್ನು ಬಂಧಿಸಲಾಗಿದೆ.
24 ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದರು.
Advertisement. Scroll to continue reading.
ಶಿವಮೊಗ್ಗ ಗಲಾಟೆ ಪ್ರಕರಣ ಸಂಬಂಧ ಒಂದು ಕಾರು, ಆಟೋ, ಎರಡು ಬೈಕ್ ಗಳಿಗೆ ಹಾನಿಯಾಗಿದೆ. 7 ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಘಟನೆ ನಡೆದ ಅರ್ಧಗಂಟೆಯಲ್ಲೇ ಪರಿಸ್ಥಿತಿಯನ್ನು ನಿಯಂತ್ರಣಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಸದ್ಯಕ್ಕೆ ಶಿವಮೊಗ್ಗದಲ್ಲಿ ಪರಿಸ್ಥಿತಿ ಶಾಂತವಾಗಿದೆ. ಯಾವುದೇ ಧಗಧಗ, ಕೊತ ಕೊತ ಇಲ್ಲ. ಯಾರೂ ಆಂತಕ ಪಡುವಂತ ವಾತಾವರಣವಿಲ್ಲ ಎಂದು ಹೇಳಿದ್ದಾರೆ.
Advertisement. Scroll to continue reading.
In this article:Diksoochi news, Hindu muslim, ragigudda, section 144, Shivamogga, strike
Click to comment