Connect with us

Hi, what are you looking for?

ಕರಾವಳಿ

ಉಡುಪಿ : ನಿಟ್ಟೂರು ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಉದ್ಘಾಟನೆ

1


ಉಡುಪಿ : ಬ್ರಹ್ಮಾವರ ವಲಯ, ಹನುಮಂತನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಿಟ್ಟೂರು ಪ್ರೌಢಶಾಲೆಯಲ್ಲಿ ಇಂದು ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಲೆಯ ಹಳೆವಿದ್ಯಾರ್ಥಿ ರಂಜಿತ್ ಕುಮಾರ್ ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣದಲ್ಲಿ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಮುರಲಿ ಕಡೆಕಾರ್, ಈ ಕಾರ್ಯಕ್ರಮದಿಂದ ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಅನಾವರಣಗೊಳ್ಳಲು ಸೂಕ್ತ ವೇದಿಕೆ ದೊರೆಯುತ್ತಿದೆ. ಸ್ಪರ್ಧಾರ್ಥಿಗಳು ಸೋಲು ಮತ್ತು ಗೆಲುವನ್ನು ಸಮನಾಗಿ ಸ್ವೀಕರಿಸಬೇಕು ಎಂದರು.

ಬ್ರಹ್ಮಾವರ ಸಮೂಹ ಸಂಪನ್ಮೂಲ ವ್ಯಕ್ತಿ ಸುರೇಶ್ ಕುಂದರ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

Advertisement. Scroll to continue reading.

ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಎಮ್.ಗಂಗಾಧರ ರಾವ್, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗೀಶ್ಚಂದ್ರಾಧರ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಕಮಲಾಕ್ಷ ಶೇಟ್, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಲಕ್ಷೀ ನಿವೃತ್ತ ಅಧ್ಯಾಪಕ ಎಚ್.ಎನ್. ಶೃಂಗೇಶ್ವರ ಉಪಸ್ಥಿತರಿದ್ದರು.

ಅಪರಾಹ್ನ ನಡೆದ ಸಮಾರೋಪ ಸಮಾರಂಭದಲ್ಲಿ ಹಿರಿಯ ಉದ್ಯಮಿ ವಿಶ್ವನಾಥ ಶೆಣೈ, ಶಾಲಾ ಹಳೆವಿದ್ಯಾರ್ಥಿ ಉದ್ಯಮಿ ದಾಮೋದರ ಭಟ್, ಬ್ರಹ್ಮಾವರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಹಾವಂಜೆ, ಮಣಿಪಾಲ ಹೋಬಳಿ ಶಿಕ್ಷಣ ಸಂಯೋಜಕರಾದ ನಾಗರ್ಜುನ ಅತಿಥಿಗಳಾಗಿ ಭಾಗವಹಿಸಿ ಶುಭಹಾರೈಸಿದರು.

ಹನುಮಂತನಗರ ಕ್ಲಸ್ಟರ್ ಸಿ.ಆರ್.ಪಿ. ಆಶಾಲತಾ ಪ್ರಸ್ತಾವಿಕ ಮಾತುಗಳಾನ್ನಾಡಿದರು. ಮುಖ್ಯೋಪಾಧ್ಯಾಯಿನಿ ಅನಸೂಯ ಸ್ವಾಗತಿಸಿದರು. ಶಿಕ್ಷಕಿ ನಮಿತಾಶ್ರೀ ಧನ್ಯವಾದ ಸಮರ್ಪಿಸಿದರು. ಶಿಕ್ಷಕ ದೇವದಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!