Connect with us

Hi, what are you looking for?

Diksoochi News

Uncategorized

ASIAN GAMES 2023: ಚಿನ್ನದ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಅನ್ನು ರಾಣಿ

1

ASIAN GAMES : ಏಷಿಯನ್ ಗೇಮ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳ ಅದ್ಭುತ ಪ್ರದರ್ಶನ ಮುಂದುವರಿದಿದೆ. ಪಾರೂಲ್ ಚೌಧರಿ ಚಿನ್ನದ ಪದಕವನ್ನು ಗೆದ್ದ ಬಳಿಕ ಇದೀಗ ಮತ್ತೋರ್ವ ಮಹಿಳಾ ಅಥ್ಲೀಟ್ ಅನ್ನು ರಾಣಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.

ಜಾವೆಲಿನ್ ಎಸೆತದಲ್ಲಿ ಅನ್ನು ರಾಣಿ ಚಿನ್ನ ಗೆದ್ದಿದ್ದಾರೆ. ಈ ಮೂಲಕ 71 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಈ ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿಗೆ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕವನ್ನು ಗೆದ್ದ ಭಾರತದ ಮಹಿಳಾ ಅಥ್ಲೀಟ್ ಎನಿಸಿಕೊಂಡಿದ್ದಾರೆ.

ಅನ್ನು 62.92 ಮೀ. ದೂರಕ್ಕೆ ಎಸೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದರು. ಪ್ರಸ್ತುತ 31ರ ಹರೆಯದ ಅನ್ನು ರಾಣಿ ಇದಕ್ಕೂ ಮುನ್ನ 2014ರಲ್ಲಿ ಕಂಚಿನ ಪದಕವನ್ನು ಗೆದ್ದುಕೊಂಡಿದ್ದರು.

Advertisement. Scroll to continue reading.

ಇದಕ್ಕೂ ಮುನ್ನ ಮಹಿಳೆಯರ 5000 ಮೀಟರ್ ಸ್ಪರ್ಧೆಯಲ್ಲಿ ಪಾರೂಲ್ ಚೌಧರಿ ಚಿನ್ನದ ಪದಕ ಗೆದ್ದಿದ್ದಾರೆ. ಇದಕ್ಕೂ ಮುನ್ನ ಪಾರೂಲ್ 3000 ಮೀಟರ್ ಸ್ಟೀಪಲ್‌ಚೇಸ್‌ನಲ್ಲಿ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!