Connect with us

Hi, what are you looking for?

ರಾಜ್ಯ

ವಿಧಾನ ಪರಿಷತ್‌ನಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗೀಕಾರ

2

ಬೆಂಗಳೂರು: ವಿಧಾನ ಪರಿಷತ್‍ನಲ್ಲಿ ಧ್ವನಿ ಮತದ ಮೂಲಕ ಮತಾಂತರ ನಿಷೇಧ ವಿಧೇಯಕ ಅಂಗೀಕಾರ ಮಾಡಲಾಗಿದೆ. ವಿಧಾನ ಪರಿಷತ್ ಕಲಾಪದಲ್ಲಿ ಬೆಳಗಾವಿ ಅಧಿವೇಶನದಲ್ಲಿ ವಿಧಾನಸಭೆಯಿಂದ ಅಂಗೀಕಾರಗೊಂಡಿದ್ದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಮಂಡಿಸಿದ್ದರು.

ಇದೇ ವೇಳೆ ಅವರು, ಬಹಳ ಮಹತ್ವದ ಕಾಯ್ದೆಯನ್ನು ಸರ್ಕಾರ ತಂದಿದೆ.

2013 ರಲ್ಲಿ ಕಾಂಗ್ರೆಸ್‌ ಸರ್ಕಾರ ಇದ್ದಾಗಲು ಇದರ ಬಗ್ಗೆ ಚಿಂತನೆ ನಡೆಸಿತ್ತು. ಎಲ್ಲರಿಗೂ ಅವರವರ ಧಾರ್ಮಿಕ ಹಕ್ಕಿನಲ್ಲಿ ಬದುಕುವ ಅವಕಾಶವಿದೆ. ಆದರೆ ಇತ್ತೀಚೆಗಿನ ದಿನಗಳಲ್ಲಿ ಬಲವಂತದಿಂದ, ಆಮಿಷದ ಮತಾಂತರ ನಡೆಯುತ್ತಿದೆ. ನಮ್ಮ ಶಾಸಕರೇ ಕಳೆದ ಬಾರಿ ವಿಧಾನ ಸಭೆಯಲ್ಲಿ ಹೇಳಿದ್ರು, ನನ್ನ ತಾಯಿಯನ್ನೇ ಮತಾಂತರ ಮಾಡಲಾಗಿದೆ ಎಂದು ಹೇಳಿದ್ದರು ಎಂದು ಅಧಿವೇಶನದಲ್ಲಿ ಪ್ರಸ್ತಾಪಿಸಿದರು.

Advertisement. Scroll to continue reading.

ಇಲ್ಲಿ ಯಾವುದೇ ವೋಟ್ ಬ್ಯಾಂಕ್ ರಾಜಕಾರಣ ಇಲ್ಲ. ಇದು ಜಾತ್ಯತೀತ ರಾಷ್ಟ್ರ. ಎಲ್ಲರನ್ನೂ ಒಪ್ಪುವ ಸಂಸ್ಕೃತಿ ನಮ್ಮದು. ಬೇರೆ ರಾಷ್ಟ್ರದ ಧರ್ಮದವರೂ ಇಲ್ಲಿ‌ ನೆಮ್ಮದಿಯಿಂದ ಬಾಳುತ್ತಿದ್ದಾರೆ. ಅವರ ರಾಷ್ಟ್ರದಲ್ಲೇ ರಕ್ತಪಾತ ಹೆಚ್ಚಾಗುತ್ತಿದೆ. ಈ ರಾಷ್ಟ್ರದ ಸಂಸ್ಕೃತಿ ಅಂತದ್ದು. ಆದರೆ, ಬೇರೆ ಧರ್ಮದವರು ವ್ಯವಸ್ಥಿತವಾಗಿ ಯಾವ ಕಾರ್ಯ, ಕೃತ್ಯ ನಡೆಸುತ್ತಿದ್ದಾರೆ‌ ಎನ್ನುವುದು ಎಲ್ಲರಿಗೂ ತಿಳಿದಿದೆ ಎಂದರು.

ಮತಾಂತರವಾದರೆ ಶಿಕ್ಷೆ ಏನು ಎನ್ನುವುದು ಸಂವಿಧಾನದಲ್ಲಿ ಇರಲಿಲ್ಲ. ಈಗ ಅದನ್ನು ತಂದಿದ್ದೇವೆ. ಹೋಗುವಾಗ ಹೇಳಿ ಹೋಗು ಎಂದು ಕಾನೂನು ಹೇಳಿದೆ. ಸಂವಿಧಾನ ರಚನೆ ಸಂದರ್ಭ ಈ ಪ್ರಮಾಣದ ಮತಾಂತರ ಆಗುವ ನಿರೀಕ್ಷೆ ಇರಲಿಲ್ಲ. ಆದರೆ, ಮತಾಂತರ ಆಗುತ್ತಿರುವ ಹಿನ್ನೆಲೆ ಕಾನೂನು ತಡೆ ತರಲು ಮುಂದಾಗಿದ್ದೇವೆ. ಬಲವಂತವಾಗಿ ಮತಾಂತರ ಆದಾಗ ಶಿಕ್ಷೆ ವಿಧಿಸಲು ಕಾನೂನು ಬದಲಾವಣೆ ಮಾಡಲಾಗಿದೆ ಎಂದರು.

ಈ ವೇಳೆ ಪ್ರತಿಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು. ಈ ವೇಳೆಯಲ್ಲಿ ವಿಧಾನಪರಿಷತ್ತಿನ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ತಿದ್ದುಪಡಿ ವಿಧೇಯಕ ಪ್ರತಿಯನ್ನೇ ಹರಿದು ತೀವ್ರ ವಿರೋಧ ವ್ಯಕ್ತ ಪಡಿಸಿದ ಘಟನೆ ನಡೆದಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!