ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಚಾಲನೆ ಸಿಕ್ಕಿದೆ. ವಿಶ್ವಕಪ್‌ನಲ್ಲಿ ಭಾರತದ ಅಭಿಯಾನ ಅಕ್ಟೋಬರ್ 8ರಿಂದ ಆರಂಭಗೊಳ್ಳಲಿದೆ. ಅಂದು ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೊದಲ ಪಂದ್ಯ ಆಡಲಿದೆ. ಆದರೆ ಇದಕ್ಕೂ ಮೊದಲು ಭಾರತ ತಂಡಕ್ಕೆ ದೊಡ್ಡ ಆಘಾತ ಉಂಟಾಗಿದೆ. ತಂಡದ ಇನ್-ಫಾರ್ಮ್ ಆಟಗಾರ ಶುಭ್ಮನ್ ಗಿಲ್ ಅವರಿಗೆ ಡೆಂಘೀ ಸೋಂಕು ದೃಢ ಪಟ್ಟಿದೆ. 24ರ ಹರೆಯದ ಗಿಲ್ ಭಾನುವಾರ ಆಸ್ಟ್ರೇಲಿಯಾ ವಿರುದ್ಧದ ಮೊದಲ ವಿಶ್ವಕಪ್ ಪಂದ್ಯದಲ್ಲಿ ಆಡುವುದು ಅನುಮಾನ ಎಂದು ಹೇಳಲಾಗಿದೆ.
2023ರ ಏಕದಿನ ಕ್ರಿಕೆಟ್ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಗಿಲ್, ವಿಶ್ವಕಪ್‌ನಲ್ಲಿ ಕೂಡ ತಮ್ಮ ಫಾರ್ಮ್ ಮುಂದುವರಿಸುವ ಸಾಧ್ಯತೆ ಇದೆ. ಆದರೀಗ ಇವರ ಅನುಪಸ್ಥಿತಿ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಇವರ ಬದಲು ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ಇಶಾನ್ ಕಿಶನ್ ಆಡುವ ಸಾಧ್ಯತೆ ಇದೆ.
ಗಿಲ್ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಿಂದ ಕೈಬಿಡುವ ಮೊದಲು ಇಂದು ಮತ್ತೊಮ್ಮೆ ಡೆಂಘೀ ಪರೀಕ್ಷೆಗೆ ಒಳಗಾಗಲಿದ್ದಾರೆ. ಜ್ವರ ತೀವ್ರವಾಗಿದ್ದರೆ ಗಿಲ್ ಮೊದಲ ಎರಡು ಪಂದ್ಯಗಳನ್ನು ಕಳೆದುಕೊಳ್ಳಬಹುದು. “ಚೆನ್ನೈಗೆ ಬಂದಿಳಿದ ನಂತರ ಶುಭ್‌ಮನ್‌ಗೆ ತೀವ್ರ ಜ್ವರವಿತ್ತು. ಈ ಕುರಿತು ಪರೀಕ್ಷೆಗಳು ನಡೆಯುತ್ತಿವೆ. ಶುಕ್ರವಾರ ಟೆಸ್ಟ್ ನಡೆಸಿ ಆರಂಭಿಕ ಪಂದ್ಯದಲ್ಲಿ ಭಾಗವಹಿಸುವ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.