Connect with us

Hi, what are you looking for?

ರಾಜ್ಯ

ಸರಣಿ ಅಪಘಾತ: ಪತಿಯನ್ನು ಉಳಿಸಲು ಹೊರಟ ಪತ್ನಿ, ಬೈಕ್ ಸವಾರ ಸಾವು

3

ದಾವಣಗೆರೆ: ರಾಷ್ಟ್ರೀಯ ಹೆದ್ದಾರಿ 04ರ ಕಲ್ಪನಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದೆ. ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.

ಮೊರಾರ್ಜಿ ದೇಸಾಯಿ ಶಾಲೆ ಶಿಕ್ಷಕಿ ಜ್ಯೋತಿ (43) ಮತ್ತು ಪವಾಡರಂಗವ್ವನಹಳ್ಳಿಯ ಮಂಜುನಾಥ್ (68) ಮೃತಪಟ್ಟವರು.

ಶಿಕ್ಷಕಿ ಜ್ಯೋತಿ ಕುಟುಂಬ ಸಮೇತ ತಮಿಳುನಾಡು, ಮದುರೈಗೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಜ್ಯೋತಿ ಅವರ ಪತಿಗೆ ಹೃದಯಾಘಾತ ಸಂಭವಿಸಿತ್ತು. ಅವರಿಗೆ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಗೆ ಆ್ಯಂಬುಲೆನ್ಸ್ ಮೂಲಕ ಕರೆತರಲಾಗುತ್ತಿತ್ತು. ಆ್ಯಂಬುಲೆನ್ಸ್ ಚಾಲಕ ಟ್ರ್ಯಾಕ್ಟರ್ ಹಿಂದಿಕ್ಕಲು ಯತ್ನಿಸಿದ್ದಾನೆ. ಆಗ ಟ್ರ್ಯಾಲಿಗೆ ಆ್ಯಂಬುಲೆನ್ಸ್ ರಭಸವಾಗಿ ಡಿಕ್ಕಿಯಾಗಿದೆ. ಈ ವೇಳೆ ಆ್ಯಂಬುಲೆನ್ಸ್‌ನಲ್ಲಿದ್ದ ಶಿಕ್ಷಕಿ ಜ್ಯೋತಿ ಅವರ ತಲೆಗೆ ಬಲವಾದ ಪೆಟ್ಟಾಗಿದ್ದು, ಗಂಭೀರ ಗಾಯಗೊಂಡಿದ್ದರು.

Advertisement. Scroll to continue reading.

ಬಳಿಕ ಅವರನ್ನು ಮತ್ತೊಂದು ಆ್ಯಂಬುಲೆನ್ಸ್ ಮೂಲಕ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಅಪಘಾತದ ರಭಸಕ್ಕೆ ಗಾಬರಿಗೊಂಡು ಚಾಲಕ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್ ದಾವಣಗೆರೆಗೆ ತೆರಳುತ್ತಿದ್ದ ಪವಾಡರಂಗವ್ವನಹಳ್ಳಿಯ ಮಂಜುನಾಥ್ ಅವರ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಮಂಜುನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಆ್ಯಂಬುಲೆನ್ಸ್ ಚಾಲಕ ಮಹಮದ್ ಮೀರನ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!